ಸೆ.15: ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಸಂಗಮ

Update: 2017-09-13 11:59 GMT

ಮಂಗಳೂರು, ಸೆ.13: ಸಂವಿಧಾನದತ್ತವಾದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿ ಮತ್ತು ರೋಹಿಂಗ್ಯಾ ಮುಸಲ್ಮಾನರ ಹತ್ಯೆಯನ್ನು ಖಂಡಿಸಿ ಎಸ್ಕೆಎಸ್ಸೆಸ್ಸೆಫ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ಸೆ.15ರಂದು ಅಪರಾಹ್ನ 3:30ಕ್ಕೆ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಸಂಗಮ ನಡೆಯಲಿದೆ.

ಜಿಲ್ಲಾಧ್ಯಕ್ಷ ಇಸಾಕ್ ಫೈಝಿಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ದುಆ ಮಾಡಲಿದ್ದು, ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ.

ಮೌಲಾನಾ ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಸ್ವದಕತುಲ್ಲಾ ಫೈಝಿ, ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಯಮಾನಿ ತಿಂಗಳಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News