ಮದ್ಯದ ಅಮಲಿನಲ್ಲಿ ಪತ್ನಿ, ಮಕ್ಕಳಿಗೆ ಹಲ್ಲೆ: ದೂರು

Update: 2017-09-14 16:46 GMT

ಬಂಟ್ವಾಳ, ಸೆ. 14: ದಿನನಿತ್ಯ ಮದ್ಯಪಾನ ಮಾಡಿ ತನ್ನ ಪತ್ನಿ ಹಾಗೂ ಮಕ್ಕಳಿಗೆ ಹಲ್ಲೆ ನಡೆಸುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ಕೊಡ್ಮಾಣ್ ಸಮೀಪದ ಪೈಕ ಎಂಬಲ್ಲಿನ ನಿವಾಸಿ ಮಾಧವ ಪೂಜಾರಿ ಎಂದು ಗುರುತಿಸಲಾಗಿದೆ. ಈತ ಕೂಲಿ ಕಾರ್ಮಿಕನಾಗಿದ್ದು, ಪ್ರತಿ ದಿನ ಮದ್ಯ ಸೇವಿಸಿ ಬಂದು ಮನೆಯಲ್ಲಿ ಪತ್ನಿ ಸಹಿತ ಮಕ್ಕಳಿಗೆ ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News