ಪುಂಜಾಲಕಟ್ಟೆ:15 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ

Update: 2017-09-16 14:17 GMT

ಬಂಟ್ವಾಳ, ಸೆ. 16: ತಾಲೂಕಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸಂಘದ 33ನೇ ವರ್ಷಾಚರಣೆ ಅಂಗವಾಗಿ ಇಲ್ಲಿನ ವಿದ್ಯುತ್ ರಹಿತ ಬಡ ಕುಟುಂಬಗಳ ಮನೆಗೆ ಉಚಿತ ವಿದ್ಯುತ್ ಸಂಪರ್ಕ ಒದಗಿಸುವ ಮೂಲಕ ಸಂಘದ ವರ್ಷಾಚರಣೆಯನ್ನು ವಿನೂತನವಾಗಿ ಆಚರಿಸಿತು.

ತಾಲೂಕಿನಲ್ಲಿ ಕಲೆ, ಸಾಹಿತ್ಯ, ಕ್ರೀಡೆ, ಆರೋಗ್ಯ, ಉಚಿತ ಸಾಮೂಹಿಕ ವಿವಾಹ ಮತ್ತಿತರ ಸಮಾಜಮಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡ ಇಲ್ಲಿನ ಈ ಕ್ಲಬ್, ಪಿಲಾತಬೆಟ್ಟು, ಇರ್ವತ್ತೂರು ಗ್ರಾಮ ಪಂಚಾಯತ್‌ನ ವಿದ್ಯುತ್ ರಹಿತ 15 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ ಒದಗಿಸಿ ಆ ಮನೆಗಳಲ್ಲಿ ಬೆಳಕು ಮೂಡಿಸಿದೆ.

ಕಳೆದ 2015ರಲ್ಲಿ ಪಿಲಾತಬೆಟ್ಟು ಗ್ರಾಮದ ದುಗ್ಗಮಾರು ಗುಡ್ಡೆ ಕೊರಗರ ಕಾಲೊನಿಗೆ ಬಂಟ್ವಾಳ ರೋಟರಿ ಕ್ಲಬ್ ವತಿಯಿಂದ ಉಚಿತ 9 ಮನೆ ನಿರ್ಮಿಸಿ ಕೊಟ್ಟಿತ್ತು. ಆದರೆ ಅಲ್ಲಿನ ಕೆಲವೊಂದು ಮನೆಗಳಿಗೆ ಕಾನೂನು ತೊಡಕಿನಿಂದ ವಿದ್ಯುತ್ ಸಂಪರ್ಕ ನೀಡಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ಸ್ಥಾಪಕಾಧ್ಯಕ್ಷ, ಸ್ಥಳೀಯ ಜಿಪಂ ಸದಸ್ಯ ಎಂ.ತುಂಗಪ್ಪ ಬಂಗೇರ ಮತ್ತು ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಇವರು ದಾನಿಗಳನ್ನು ಸಪರ್ಕಿಸಿ ಎಲ್ಲ 9 ಮನೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಿದ್ದಾರೆ.

ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಕೆ. ಲಕ್ಷ್ಮೀನಾರಾಯಣ ಉಡುಪ, ಜಗನ್ನಾಥ ಬಂಟ್ವಾಳ್, ಸಂತೋಷ್ ಮೂರ್ಜೆ, ಗ್ರಾಪಂ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ತಾಪಂ ಸದಸ್ಯ ರಮೇಶ್ ಕುಡ್ಮೇರ್, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಂದರ ನಾಯ್ಕ, ವಾಮದಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಪಿಡಿಒ ಬಾಲಕೃಷ್ಣ ಪೂಜಾರಿ, ಉಪಾಧ್ಯಕ್ಷ ಶಂಕರ್ ಶೆಟ್ಟಿ, ಸದಸ್ಯರಾದ ಯೋಗೇಂದ್ರ, ನಾರಾಯಣ, ದಯಾನಂದ, ಮಾಜಿ ಸದಸ್ಯ ರವಿಶಂಕರ್ ಹೊಳ್ಳ ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News