ಬಿವಿಟಿಯಲ್ಲಿ ಗೃಹ ಉತ್ಪನ್ನ ತರಬೇತಿ

Update: 2017-09-19 16:12 GMT

ಮಣಿಪಾಲ, ಸೆ.19: ಯಶಸ್ವೀ ಉದ್ಯಮಿಯಾಗಲು ಹೆಚ್ಚಿನ ವಿದ್ಯಾಭ್ಯಾಸದ ಅಗತ್ಯವಿಲ್ಲ. ಇಲ್ಲಿನ ಪರಿಸರ ಮತ್ತು ಬೇಡಿಕೆಯನ್ನು ಗಮನದಲ್ಲಿಟ್ಟು ಪ್ರಾಮಾಣಿಕ ದುಡಿಮೆ ಕೈಗೊಂಡರೆ ಗೃಹ ಉತ್ಪನ್ನಗಳ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿ ನಡೆಸಿಕೊಂಡು ಹೋಗಬಹುದು ಎಂದು ಶಿವಳ್ಳಿಯ ಭಾರತೀಯ ವಿಕಾಸ ಟ್ರಸ್ಟ್‌ನ ಆಡಳಿತ ಟ್ರಸ್ಟಿ ಕೆ.ಎಂ.ಉಡುಪ ಹೇಳಿದ್ದಾರೆ.

 ಮಣಿಪಾಲದ ಶಿವಳ್ಳಿಯಲ್ಲಿರುವ ಭಾರತೀಯ ವಿಕಾಸ ಟ್ರಸ್ಟ್‌ನಲ್ಲಿ ಜಿಲ್ಲೆಯ ಆಸಕ್ತರಿಗಾಗಿ ಆಯೋಜಿಸಲಾದ ಗೃಹ ಉತ್ಪನ್ನ ತಯಾರಿ ತರಬೇತಿಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಈ ತರಬೇತಿಯಲ್ಲಿ ಶಿಬಿರಾರ್ಥಿಗಳಿಗೆ ಗೃಹ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಬಗ್ಗೆ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ವಿಸ್ತ್ರತ ಮಾಹಿತಿ ನೀಡಲಾಗುತ್ತದೆ. ಇದರ ಸದುಪಯೋಗ ಪಡೆದುಕೊಂಡು ಯಶಸ್ವಿ ಉದ್ಯಮಿ ಎನಿಸುವಂತೆ ಅವರು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು.

 ಬಿವಿಟಿಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀಬಾಯಿ ಅತಿಥಿಗಳನ್ನು ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು. ವೇದಿಕೆಯಲ್ಲಿ ಬಿವಿಟಿ ಸಿಇಒ ಮನೋಹರ ಕಟ್ಗೇರಿ, ಸಂಪನ್ಮೂಲ ವ್ಯಕ್ತಿ ಸುಮಂಗಲ ಡೋಂಗ್ರೆ ಉಪಸ್ಥಿತರಿದ್ದರು. ಈ ತರಬೇತಿಯಲ್ಲಿ ಉಡುಪಿ, ದ.ಕ. ಜಿಲ್ಲೆಯ 32 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News