ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತನ್ನಿ: ಶಾಸಕಿ ಶಕುಂತಳಾ ಶೆಟ್ಟಿ

Update: 2017-09-23 14:50 GMT

ಪುತ್ತೂರು, ಸೆ. 23: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳು ನಡೆದಿದೆ. ಬಡವರಿಂದ ಹಿಡಿದು ಪ್ರತೀಯೊಂದು ವರ್ಗಕ್ಕೂ ಸಹಕಾರಿಯಾಗುವ ರೀತಿಯಲ್ಲಿ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮುಂದಿನ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಕಾರಕ್ಕೆ ಬರುವಂತಾಗಲು ಪ್ರತೀಯೊಬ್ಬ ಮತದಾರನೂ ಪಕ್ಷವನ್ನು ಬೆಂಬಲಿಸಬೇಕು ಎಂದು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಮನವಿ ಮಾಡಿದರು.

ಅವರು ನರಿಮೊಗರು ಗ್ರಾಮದ ಮುಕ್ವೆ ಮಣಿಯದ ಇಲ್ಯಾಸ್ ಸಾಹೇಬ್ ಎಂಬವರ ಮನೆಯಲ್ಲಿ ನಡೆದ ಮನೆ ಮನೆ ಬೇಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮತನಾಡಿದರು.

ಅಕಾರ ಬಂದ ಸಮಯದಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 150 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ನಾಲ್ಕು ವರ್ಷದ ಆಡಳಿತದಲ್ಲಿ ಎಲ್ಲಾ ವರ್ಗಗಳಿಗೂ ಸೌಲಭ್ಯವನ್ನು ಕಲ್ಪಿಸಲಗಿದೆ, ಯಾವುದೇ ತಾರತಮ್ಯ ಮಾಡದೆ ಪ್ರತೀಯೊಬ್ಬರೂ ಸರಕಾರದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ. ಮುಂದಿನ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಕಾರಕ್ಕೆ ತರುವ ಮೂಲಕ ರಾಜ್ಯವನ್ನು ಅಭಿವೃದ್ದಿ ಪಥದತ್ತ ಕೊಮಡೊಯ್ಯಲು ಎಲ್ಲಾ ಮತದಾರನೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕೆಪಿಸಿಸಿ ಕಾರ್ಯದರ್ಶಿ ಕವಿತಾ ರಮೇಶ್ ಮಾತನಾಡಿ ದೇಶದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ಸರಕಾರ ಎಲ್ಲಾ ರಂಗದಲ್ಲೂ ವಿಫಲವಾಗಿದೆ. ನೋಟ್ ಬ್ಯಾನ್, ಜಿಎಸ್‌ಟಿ ಸೇರಿದಂತೆ ಕೆಲವೊಂದು ಅಸ್ಪಷ್ಟ ನಿರ್ಧಾರಗಳ ಕಾರಣದಿಂದ ಜನ ಸಾಮಾನ್ಯರ ಬದುಕು ದುಸ್ಥರವಾಗಿದೆ, ನಿತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ, ಇಂಧನ ಬೆಲೆ ಗಗನಕ್ಕೇರಿದೆ, ಅಡುಗೆ ಅನಿಲ ದರವೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ, ನೋಟ್ ಬ್ಯಾನ್ ಬಳಿಕ ದೇಶದ ಆರ್ಥಿಕ ವ್ಯವಸ್ಥೆ ಪಾತಾಳಕ್ಕೆ ಬಂದಿದೆ. ಮಧ್ಯಮವರ್ಗದ ಜನರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಪ್ರತೀ ಬಾರಿಯೂ ಚುನಾವಣೆ ಹತ್ತಿರವಾಗುತ್ತಲೇ ಕೋಮು ಗಲಭೆಯನ್ನು ಸೃಷ್ಟಿಸಿ ಜನರ ಮನಸ್ಸನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮರೆ ಮಾಚಲು ಯತ್ನಿಸುತ್ತಿರುವ ಬಿಜೆಪಿ ದೇಶದ ಜನತೆಗೆ ವಂಚನೆ ಮಾಡುತ್ತಿದೆ ಎಂದು ಹೇಳಿದರು.

ಪ್ರತೀ ಮನೆಗೂ ಭೇಟಿ
ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರತೀಯೊಂದು ಮನೆಗೂ ಕಾಂಗ್ರೆಸ್ ನಾಯಕರನ್ನೊಳಗೊಂಡ ಕಾರ್ಯಕರ್ತರ ತಂಡ ಭೇಟಿ ಮಾಡಿ ಅವರ ಆರ್ಥಿಕ ಸ್ಥಿತಿಗತಿ, ಸರಕಾರದಿಂದ ಪಡೆದಿರುವ ಸೌಲಭ್ಯಗಳ ಮಾಹಿತಿಯನ್ನು ಸಂಗ್ರಹಿಸುವ ಕೆಲಸವನ್ನು ಮಾಡಲಿದ್ದು ನಿಗಪಡಿಸಿದ ದಿನಾಮಕದೊಳಗೆ ರಾಜ್ಯ ಕೆಪಿಸಿಸಿಗೆ ಮಾಹಿತಿಯನ್ನು ಕಳುಹಿಸಲಾಗುತ್ತದೆ.

ಕಾರ್ಯಕ್ರಮಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಕೆಪಿಸಿಸಿ ಕಾರ್ಯದರ್ಶಿ  ಮಾಜಿ ಶಾಸಕ ಕೆ ಎಂ ಇಬ್ರಾಹಿಂ ಶುಂಠಿಕೊಪ್ಪ, ತಾಪಂ ಸದಸ್ಯ ಪರಮೇಶ್ವ ಭಂಡಾರಿ, ನರಿಮೊಗರು ಸಿ ಎ ಬ್ಯಾಂಕ್ ಅಧ್ಯಕ್ಷ ಬಾಬು ಶೆಟ್ಟಿ, ಪುತ್ತೂರು ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ ತೌಸೀಫ್, ನರಿಮೊಗರು ಗ್ರಾಪಂ ಅಧ್ಯಕ್ಷೆ ಚಂದ್ರಕಲಾ, ಪುತ್ತೂರು ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಎನ್‌ಎಸ್‌ಯುಐ ಅಧ್ಯಕ್ಷ ಬಾತಿಷಾ,ಪೂಡಾ ಅಧ್ಯಕ್ಷ ಪ್ರತಾಪ್ ಕೌಶಲ್ ಶೆಟ್ಟಿ, ನಗರ ಮಹಿಳಾ ಘಟಕದ ಅಧ್ಯಕ್ಷೆ ವಿಲ್ಮಾಡಿಸೋಜಾ, , ಸೇವಾದಳದ ಘಟದಕ ಅಧ್ಯಕ್ಷ ಜೋಕಿಂಡಿಸೋಜಾ, ಮುಖಂಡರಾದ ರೋಶನ್‌ರೈ ಬನ್ನೂರು, ಅಮಲರಾಮಚಂದ್ರ , ವೇದನಾಥ ಸುವರ್ಣ, ಜಯರಾಜ್ ಎಲಿಕ, ಹುಸೈನ್ ದಾರಿಮಿ ರೆಂಜಲಾಡಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್ ಪಾಣಂಬು ಸ್ವಾಗತಿಸಿದರು. ನರಿಮೊಗರು ಗ್ರಾಪಂ ಉಪಾಧ್ಯಕ್ಷ ರವೀಂದ್ರ ರೈ ನೆಕ್ಕಿಲು ವಂದಿಸಿದರು. ಕೆಡಿಪಿ ಸದಸ್ಯ ಕೃಷ್ಣಪ್ರಸಾದ್ ಆಳ್ವ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News