ದಸರಾ ಮಹೋತ್ಸವ: ಅರಮನೆ ಅಂಗಳದಲ್ಲಿ ಯೋಗಾಸನ

Update: 2017-09-24 17:38 GMT

ಮೈಸೂರು,ಸೆ.24: ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ರವಿವಾರ ಬೆಳಗ್ಗೆ ಯೋಗೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಅರಮನೆ ಅಂಗಳದಲ್ಲಿ  ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಎಂ.ಕೆ.ಸೋಮಶೇಖರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಂಜಾನೆ 6 ಗಂಟೆಗೆ ಸರಿಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಯೋಗೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಯೋಗಾಸ್ತರು, ವಿದ್ಯಾರ್ಥಿಗಳು, ಸಾರ್ವಜನಿಕರು ಅರಮನೆ ಆವರಣದಲ್ಲಿ ಸಮಾವೇಶಗೊಂಡಿದ್ದರು. ಮೊದಲಿಗೆ ಪ್ರಾರ್ಥನೆ ಮೂಲಕ ಆರಂಭವಾದ ಯೋಗ, ಬಳಿಕ ಚಾಲನಾ ಕ್ರಿಯೆಗಳು, ಸೂರ್ಯ ನಮಸ್ಕಾರ, ಪ್ರಾಣಾಯಾಮ, ಶವಾಸನ, ಧ್ಯಾನ, ಶಾಂತಿ ಮಂತ್ರ, ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.

ಮೈಸೂರು ಜಿಲ್ಲಾ ಯೋಗ ಸ್ಪೋಟ್ರ್ಸ್ ಫೌಂಡೇಶನ್, ಜಿ.ಎಸ್.ಎಸ್ ಯೋಗಿಕ್ ರಿಸರ್ಚ್ ಫೌಂಡೇಶನ್, ಮೈಸೂರು ಯೋಗ ಒಕ್ಕೂಟ, ಪತಂಜಲಿ ಯೋಗ ಸಮಿತಿ ಮತ್ತು ಭಾರತ ಸ್ವಾಭಿಮಾನ ಟ್ರಸ್ಟ್,  ಮೈಸೂರು ಯೋಗ ಅಸೋಸಿಯೇಶನ್ ಈ ಯೋಗೋತ್ಸವದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಯೋಗ ದಸರಾ ಉಪಸಮಿತಿಯ ಉಪವಿಶೇಷಾಧಿಕಾರಿ ಜಿ.ಜಗದೀಶ್, ಸಮಿತಿಯ ಕಾರ್ಯಾಧ್ಯಕ್ಷೆ ರಮ್ಯ, ಕಾರ್ಯದರ್ಶಿ ಡಾ.ಬಿ.ಎಸ್.ಸೀತಾಲಕ್ಷ್ಮಿ, ಸುಶೀಲಾ ಸುಂದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News