ಅ.15: ಅಂತರ್ ಜಿಲ್ಲಾಮಟ್ಟದ ಹಿರಿಯ ಕ್ರೀಡಾಕೂಟ

Update: 2017-09-28 15:11 GMT

ಉಡುಪಿ, ಸೆ. 28: ಉಡುಪಿ ಮಾಸ್ಟರ್ಸ್‌ ಅಥ್ಲೆಟಿಕ್ ಅಸೋಸಿಯೇಶನ್ ವತಿ ಯಿಂದ ಉಡುಪಿ, ಮಂಗಳೂರು ಹಾಗೂ ಕೊಡಗು ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟವನ್ನು ಅ.15ರಂದು ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣ ದಲ್ಲಿ ಏರ್ಪಡಿಸಲಾಗಿದೆ.

ಬೆಳಗ್ಗೆ 7:30ಕ್ಕೆ ಕ್ರೀಡಾಕೂಟ ಆರಂಭಗೊಳ್ಳಲಿದ್ದು, ಮೂರು ಜಿಲ್ಲೆಗಳ ಒಟ್ಟು 400 ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. 30ರಿಂದ 35ವರ್ಷ, 36ರಿಂದ 40ವರ್ಷ, 41ರಿಂದ 45ವರ್ಷ ವಯೋಮಾನದ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. 75ವರ್ಷ ವಯಸ್ಸಿನವರು ಕೂಡ ಇದರಲ್ಲಿ ಭಾಗವಹಿಸಬಹುದಾಗಿದೆ ಎಂದು ಅಸೋಸಿಯೇಶನ್‌ನ ಉಪಾಧ್ಯಕ್ಷ ಸೀತಾನದಿ ವಿಠಲ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಕ್ರೀಡಾಕೂಟವನ್ನು ಬೆಳಗ್ಗೆ 9:30ಕ್ಕೆ ಕಾಮನ್‌ವೆಲ್ತ್‌ನಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟು ಪುಷ್ಪರಾಜ್ ಹೆಗ್ಡೆ ಉದ್ಘಾಟಿಸಲಿರುವರು. ಮುಖ್ಯ ಅತಿಥಿಯಾಗಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸಲಿರುವರು. ಆಸಕ್ತರು ಅ.10 ರೊಳಗೆ ತಮ್ಮ ಹೆಸರನ್ನು ಮೊಬೈಲ್ ಸಂಖ್ಯೆ 9845572512, 8762552070 ಗೆ ಸಂಪರ್ಕಿಸುವಂತೆ ಕೋರಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಶನ್‌ನ ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಚೇರ್ಕಾಡಿ, ಸಂಯೋಜಕ ಮುಹಮ್ಮದ್ ಸುಹಾನ್ ಉಪಸ್ಥಿತ ರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News