ಮೈಸೂರು ಜಿಲ್ಲೆಯಲ್ಲಿ ಮೂರು ದಿನ ಸಿಎಂ ಸಿದ್ದರಾಮಯ್ಯ ಪ್ರವಾಸ
ಮೈಸೂರು, ಸೆ.28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 1 ರವರೆಗೆ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸೆಪ್ಟೆಂಬರ್ 29 ರಂದು 10-35 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬೆಳಗ್ಗೆ 11-30 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ವೈಮಾನಿಕ ಹಾರಾಟ ಪ್ರದರ್ಶನ ಉದ್ಘಾಟಿಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸೆಪ್ಟೆಂಬರ್ 30 ರಂದು ಬೆಳಗ್ಗೆ 9ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡುವರು. ಮಧ್ಯಾಹ್ನ 12-15ಕ್ಕೆ ಅರಮನೆ ಆವರಣದಲ್ಲಿ ಬಲರಾಮ ದ್ವಾರದಲ್ಲಿ ನಂದೀ ಧ್ವಜ ಪೂಜೆಯಲ್ಲಿ ಭಾಗವಹಿಸುವರು. ಸಂಜೆ 4-45ಕ್ಕೆ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8ಕ್ಕೆ ಬನ್ನಿಮಂಟಪ ಮೈದಾನದಲ್ಲಿ ಪಂಜಿನ ಕವಾಯತು ವೀಕ್ಷಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಅಕ್ಟೋಬರ್ 1 ರಂದು ಬೆಳಗ್ಗೆ 10-30ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಫ್ಟರ್ ಮೂಲಕ ಚಿತ್ರದುರ್ಗ ಜಿಲ್ಲೆಗೆ ತೆರಳುವರೆಂದು ಪ್ರಕಟನೆ ತಿಳಿಸಿದೆ.