ಕೋಟ್ಪಾಕಾಯ್ದೆ: ಅಲ್ಲಲ್ಲಿ ದಾಳಿ, ದಂಡ ವಸೂಲಿ

Update: 2017-09-30 15:17 GMT

ಉಡುಪಿ, ಸೆ.30: ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳ, ಕಾರ್ಕಳ ತಾಲೂಕಿನ ಎಣ್ಣೆಹೊಳೆ ಮತ್ತು ಹಿರ್ಗಾನ ಪ್ರದೇಶಗಳ ವಿವಿಧ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ ಒಟ್ಟು 44 ಪ್ರಕರಣ ದಾಖಲಿಸಿ 6100 ರೂ. ದಂಡ ವಸೂಲಿ ಮಾಡಲಾಗಿದೆ. ಅಲ್ಲದೇ ಸೆಕ್ಷನ್ 4,6 (ಎ) ಮತ್ತು 6(ಬಿ) ಅಡಿ ನಾಮಫಲಕಗಳನ್ನು ವಿತರಿಸಲಾಯಿತು.

ಈ ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ವಾಸುದೇವ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಕೆ.ಕೃಷ್ಣಪ್ಪ, ಹಿರಿಯ ಆಹಾರ ಸುರಕ್ಷತಾ ಅಧಿಕಾರಿ ಕೆ.ಎಸ್.ವೆಂಕಟೇಶ್, ಹಿರಿಯ ಆರೋಗ್ಯ ಸಹಾಯಕ ಬಿ.ವಿ ಶಿವರಾಮ ರಾವ್, ಕಾರ್ಮಿಕ ಇಲಾಖೆಯ ಪ್ರಸನ್ನ ಕುಮಾರ್, ಜಿಲ್ಲಾ ಎನ್‌ಟಿಸಿಪಿ ಘಟಕದ ಸಮಾಜ ಕಾರ್ಯಕರ್ತೆ ಶೈಲಾ ಎಸ್ ಎಂ, ಕಾರ್ಕಳ ಪೋಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ದಿನಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News