​ಅ.5ರಂದು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಉದ್ಘಾಟನೆ

Update: 2017-09-30 16:13 GMT

ಕಾಪು, ಸೆ.30: ಬೆಂಗಳೂರು ಆಯುಷ್ ಇಲಾಖೆ ಬೆಂಗಳೂರು, ಉಡುಪಿ ಜಿಪಂ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಎಸ್‌ಕೆಪಿ ಹೆಲ್ತ್ ಸೆಂಟರ್ ಮಲ್ಲಾರು ಕಾಪು ಇವರ ಸಹಭಾಗಿತ್ವದಲ್ಲಿ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಉದ್ಘಾಟನೆಯು ಅ. 5ರಂದು ಬೆಳಗ್ಗೆ 10ಗಂಟೆಗೆ ಮಲ್ಲಾರು ಪಕೀರನ ಕಟ್ಟೆಯ ಖ್ವಾಜಾ ಪೀರಂ ಹೆಲ್ತ್ ಸೆಂಟರ್ ಆವರಣದಲ್ಲಿ ನಡೆಯಲಿದೆ.

ಚಿಕಿತ್ಸಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಕಾಪು ಶಾಸಕ ವಿನಯ ಕುಮಾರ್ ಸೊರಕೆ ವಹಿಸಲಿರುವರು.

ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಕ್ಯಾ.ಗಣೇಶ್ ಕಾರ್ಣಿಕ್, ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್ ಚಂದ್ರ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್.ಕೋಟ್ಯಾನ್, ಕಾಪು ಪುರಸಭೆ ಅಧ್ಯಕ್ಷೆ ಸೌಮ್ಯ ಸಂಜೀವ, ಮುಖ್ಯಾಧಿಕಾರಿ ರಾಯಪ್ಪ, ಬೆಂಗಳೂರಿನ ಉದ್ಯಮಿ ಅಬ್ದುಲ್ ಘನಿ ಖಾಜಿ, ಸೌದಿ ಅರೆಬಿಯಾದ ಉದ್ಯಮಿ ಮುಹಮ್ಮದ್ ಅಸ್ಲಾಂ ಖಾಜಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಆಯುಷ್ ಇಲಾಖೆಯ ನಿರ್ದೇಶಕ ರತನ್ ಕೇಳ್ಕರ್, ಉಪನಿರ್ದೇಶಕಿ ಡಾ. ಸರಸ್ವತಿ ರಾಮಚಂದ್ರ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News