ಉಡುಪಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

Update: 2017-10-03 14:19 GMT

ಉಡುಪಿ, ಅ.3: ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ವಲಯ ಹಾಗೂ ಕುಂಜಿಬೆಟ್ಟು ಟಿ.ಎ. ಪೈ ಇಂಗ್ಲಿಷ್ ಮಾಧ್ಯಮ ಶಾಲೆಯ ಸಹಯೋಗದೊಂದಿಗೆ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಕ್ರೀಡಾಜ್ಯೋತಿ ಹಸ್ತಾಂತರಿಸಿದ ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಮಾತನಾಡಿ, ಶೈಕ್ಷಣಿಕವಾಗಿ ಪ್ರಥಮ ಸ್ಥಾನದಲ್ಲಿರುವ ಉಡುಪಿ ಜಿಲ್ಲೆ ಕ್ರೀಡೆಯಲ್ಲೂ ಮುಂದೆ ಬರಬೇಕಾಗಿದೆ. ಕ್ರೀಡೆಯಿಂದ ಪ್ರಗತಿಶೀಲರಾಗಿ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಪಥಸಂಚಲನದ ವಂದನೆ ಸ್ವೀಕರಿಸಿದ ಮಣಿಪಾಲ ಅಕಾಡೆಮಿ ಆಫ್ ಜನ ರಲ್ ಎಜುಕೇಶನ್‌ನ ಆಡಳಿಕಾಧಿಕಾರಿ ಡಾ.ಎಚ್.ಶಾಂತರಾಮ್ ಮಾತನಾಡಿ, ಮಕ್ಕಳ ಬೌದ್ಧಿಕ ಬೆಳವಣಿಗೆ ಜೊತೆಗೆ ದೈಹಿಕ ಬೆಳವಣಿಗೆ ಕೂಡ ಮುಖ್ಯ. ಆದು ದರಿಂದ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಆಗ ಸರ್ವಾಂಗೀರ್ಣ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ. ಹೆಚ್ಚು ಹೆಚ್ಚು ಮಕ್ಕಳು ಕ್ರೀಡೆ ಯಲ್ಲಿ ತೊಡಗಿಸಿಕೊಳ್ಳುವಂತೆ ಶಿಕ್ಷಕರು ಉತ್ತೇಜನ ನೀಡಬೇಕು. ಕ್ರೀಡೆಯಲ್ಲಿ ಕ್ರೀಡಾಮನೋಭಾವನೆ ಎಂಬುದು ಮುಖ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಧ್ವಜಾರೋಹಣ ನೆರವೇರಿಸಿದರು. ನಗರಸಭಾ ಸದಸ್ಯ ಶಶಿರಾಜ್ ಕುಂದರ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಷ್ಣುಪ್ರಸಾದ್ ಪಾಡಿಗಾರ್ ಮುಖ್ಯ ಅತಿಥಿಗಳಾಗಿದ್ದರು. ಸನತ್ ಶೆಟ್ಟಿಗಾರ್ ಪ್ರತಿಜ್ಞೆ ಬೋಧಿಸಿದರು.

ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್, ದೈಹಿಕ ಶಿಕ್ಷಣ ಪರಿ ವೀಕ್ಷಣಾಧಿಕಾರಿ ಶೇಖರ ಗೌಡ ಪಾಟೀಲ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ನಾಯಕ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ ಎ.ವಿ. ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಕುಮಾರ್ ವಂದಿಸಿದರು. ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು. ತಾಲೂಕಿನ 75 ಶಾಲೆಗಳ ಒಟ್ಟು 200 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News