ಮಂಗಳೂರಿಗೆ ಆಗಮಿಸಿದ ಉ.ಪ್ರ. ಮುಖ್ಯಮಂತ್ರಿ ಆದಿತ್ಯನಾಥ್

Update: 2017-10-03 18:50 GMT

ಮಂಗಳೂರು, ಅ.3: ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಇಂದು ರಾತ್ರಿ ಸುಮಾರು 11:30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಿವ ಮಠಂದೂರ್ ಮತ್ತಿತರ ಬಿಜೆಪಿ ಮುಖಂಡರು ಈ ಸಂದರ್ಭ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. 

ವಿಮಾನ ನಿಲ್ದಾಣದಿಂದ ಹೊರಬಂದ ಅವರು ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ವಾಹನವೇರಿ ರಸ್ತೆ ಮಾರ್ಗವಾಗಿ ಕೇರಳಕ್ಕೆ ಸಾಗಿದರು. ಬುಧವಾರ ಕೇರಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆದಿತ್ಯನಾಥ್ ಭಾಗವಹಿಸುವರು ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News