ಉಡುಪಿ ಧರ್ಮಸಂಸದ್‌ನ ವೆಬ್‌ಸೈಟ್ ಉದ್ಘಾಟನೆ

Update: 2017-10-05 17:32 GMT

ಉಡುಪಿ, ಅ.5: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ದೇಶದ ಸಮಸ್ತ ಹಿಂದುಗಳ ಭಾವನೆಯಾಗಿದೆ ಎಂದು ಮಂಗಳೂರಿನ ಕರಾವಳಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗಣೇಶ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ನವೆಂಬರ್ 24ರಿಂದ 26ರವರೆಗೆ ಉಡುಪಿಯಲ್ಲಿ ನಡೆಯಲಿರುವ ಧರ್ಮಸಂಸತ್‌ನ ನೂತನ ವೆಬ್‌ಸೈಟ್‌ನ್ನು ಧರ್ಮಸಂಸತ್‌ನ ಕಾರ್ಯಾಲಯ ವಿಜಯಧ್ವಜದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿಯಲ್ಲಿ ನಡೆಯುವ ಧರ್ಮ ಸಂಸತ್‌ನಲ್ಲಿ ಈ ಬಗ್ಗೆ ಘೋಷಣೆ ಆಗಬೇಕು ಎಂಬುದು ಎಲ್ಲರ ಆಶಯವಾಗಿದೆ. ಈ ಧರ್ಮಸಂಸದ್‌ನ್ನು ಯಶಸ್ವಿಗೊಳಿ ಸಲು ಎಲ್ಲರೂ ಪಣತೊಡಬೇಕು. ಹಿಂದು ಸಮಾಜ ಹೃದಯ ವೈಶಾಲ್ಯತೆಯನ್ನು ಹೊಂದಿರುವುದರಿಂದ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದವರು ನುಡಿದರು.

ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭ ಕರಂದ್ಲಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಛಿದ್ರಕಾರಿ ಶಕ್ತಿಗಳ ವಿರುದ್ಧ  ಒಂದಾಗಿ ಕಾರ್ಯನಿರ್ವಹಿಸ ಬೇಕಿದ್ದು, ಅದಕ್ಕಾಗಿ ಉಡುಪಿ ನೆಲದಿಂದ ಸ್ಪಷ್ಟ ಸಂದೇಶ ಹೋಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಧರ್ಮ ಸಂಸತ್ ಸ್ವಾಗತ ಸಮಿತಿ ಉಪಾಧ್ಯಕ್ಷ ರಮೇಶ ಬಂಗೇರ, ಆರ್ಥಿಕ ಸಮಿತಿ ಅಧ್ಯಕ್ಷ ಅಚ್ಯುತ ಕಲ್ಮಾಡಿ ಉಪಸ್ಥಿತರಿದ್ದರು.

ಧರ್ಮ ಸಂಸತ್ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ, ವಿಹಿಂಪ ನಾಯಕ ಎಂ.ಬಿ.ಪುರಾಣಿಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಶಾಧ್ಯಕ್ಷ ಪಿ. ವಿಲಾಸ್ ನಾಯಕ್ ಸ್ವಾಗತಿಸಿ, ಭಾಗ್ಯಶ್ರೀ ಐತಾಳ್ ಕಾರ್ಯಕ್ರಮ ನಿರೂಪಿಸಿದರು. ಬಜರಂಗದಳ ಮಂಗಳೂರು ವಿಭಾಗ ಸಹಸಂಚಾಲಕ ಸುನೀಲ್ ಕೆ.ಆರ್. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News