ಸರಕಾರ ವಾಲ್ಮೀಕಿ ಸಮುದಾಯದ ಏಳಿಗೆಗೆ ಸಹಕಾರಿಯಾಗಲಿದೆ: ಸಚಿವ ಬಿ.ರಮಾನಾಥ ರೈ

Update: 2017-10-05 18:06 GMT

ಬಂಟ್ವಾಳ, ಅ. 5: ಇಂದು ಎಲ್ಲೆಡೆ ದೇವರನ್ನು ಹುಡುಕಿಕೊಂಡು ಹೋಗುತ್ತಾರೆ. ಆದರೆ ನಮ್ಮೊಳಗೇ ದೇವರಿದ್ದಾನೆ ಎಂದು ಸಹಸ್ರ ವರ್ಷಗಳ ಹಿಂದೆಯೇ ಹೇಳಿ ದವರು ವಾಲ್ಮೀಕಿ ಎಂದು ಚಿಂತಕ, ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದ್ದಾರೆ.

ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿಯ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ಗುರುವಾರ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕ ರಾಗಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಾಲ್ಮೀಕಿ ಶೋಷಿತ ಸಮುದಾಯಕ್ಕೆ ಸೇರಿದ ವ್ಯಕ್ತಿ. ರಾಮಾ ಯಣ ಮಹಾಕಾವ್ಯ ಬರೆದವರು. ಸರಕಾರ ವಾಲ್ಮೀಕಿ ಸಮುದಾಯಕ್ಕೆ ನೆರವು ನೀಡಿದ್ದು, ಸಮಾಜದ ಏಳಿಗೆಗೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಆಲಿ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಜಿಪಂ ಸದಸ್ಯ ಎಂ.ಎಸ್.ಮಹಮ್ಮದ್, ತಹಶೀಲ್ದಾರ್ ಪುರಂದರ ಹೆಗ್ಡೆ, ತಾಪಂ ಇಒ ಸಿಪ್ರಿಯಾನ್ ಮಿರಾಂದ ಸಹಿತ ಹಲವರು ಉಪಸ್ಥಿತರಿದ್ದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News