ಸುರತ್ಕಲ್ : ಲಾರಿಗೆ ಬಸ್ ಢಿಕ್ಕಿ

Update: 2017-10-06 09:30 GMT

ಸುರತ್ಕಲ್, ಅ.6: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸುವ ವೇಳೆ ಹಿಂದಿನಿಂದ ಬಂದ ಬಸ್ ಲಾರಿಗೆ ಢಿಕ್ಕಿ ಹೊಡೆದ ಘಟನೆ ಸುರತ್ಕಲ್ ಸಮೀಪದ ತಡಂಬೈಲ್ ನಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. 

ತಡಂಬೈಲ್ ನಿಂದ ದ್ವಿಚಕ್ರ ವಾಹನವೊಂದು ಸರ್ವಿಸ್ ರಸ್ತೆಯ ಮೂಲಕ ಹೆದ್ದಾರಿಗೆ ಪ್ರವೇಶಿಸುವ ವೇಳೆ, ಈ ಮಾರ್ಗವಾಗಿ ಲಾರಿಯೊಂದು ವೇಗವಾಗಿ ಬಂದಿದ್ದು, ಲಾರಿ ಚಾಲಕ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗುವುದನ್ನು ತಪ್ಪಿಸುವ ಸಲುವಾಗಿ ಹಠಾತ್ ಬ್ರೇಕ್ ಹಾಕಿದ್ದು, ಈ ಸಂದರ್ಭ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ಲಾರಿಗೆ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ. 

ಬಸ್ , ಲಾರಿ ಚಾಲಕರು ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News