ಮೃತ ಝುಬೈರ್ ಮನೆಗೆ ಸಂಸದ ನಳಿನ್ ಕುಮಾರ್ ಭೇಟಿ

Update: 2017-10-06 17:53 GMT

ಉಳ್ಳಾಲ, ಅ. 6: ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಝುಬೈರ್ ಅವರ ಮನೆಗೆ ಸಂಸದ ನಳಿನ್ ಕುಮಾರ್  ಶುಕ್ರವಾರ ಸಂಜೆ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಅವರು ಈ ಭಾಗದಲ್ಲಿ ಗಾಂಜಾ ಹಾಗೂ ಮಾದಕ ದ್ಯವ್ಯಗಳ ಪಾತ್ರ ಹೆಚ್ಚಾಗುತ್ತಿದ್ದು, ರಾಜ್ಯ ಸರಕಾರ ಇದರ ನಿಯಂತ್ರಣಕ್ಕೆ ಮುಂದಾಗುತ್ತಿಲ್ಲ. ರಾಜ್ಯದಲ್ಲಿ ನಿರಂತರವಾಗಿ ಅಲ್ಪಸಂಖ್ಯಾತರ ಹತ್ಯೆಗಳು ಹೆಚ್ಚಾಗುತ್ತಿದ್ದು ಝುಬೈರ್ ಹಂತಕರನ್ನು ಒಂದು ವಾರದೊಳಗೆ ಬಂಧಿಸಬೇಕು. ಅಲ್ಲದೆ ಹತ್ಯೆಯಾದ ಝುಬೈರ್ ಕುಟುಂಬಕ್ಕೆ ರಾಜ್ಯ ಸರಕಾರ ಕನಿಷ್ಠ 40 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಈ ಬಗ್ಗೆ ನಾನು ಕೇಂದ್ರ ಸರಕಾರಕ್ಕೂ ಮನವಿ ಮಾಡುತ್ತೇನೆ ಎಂದೂ ತಿಳಿಸಿದರು. ಈ ಸಂದರ್ಭದಲ್ಲಿ ಸಂಸದರೊಂದಿಗೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಝುಬೈರ್ ಮಕ್ಕಳಿಗೆ ಶಿಕ್ಷಣದ ಭರವಸೆ ನೀಡಿದ ಬಿಜೆಪಿ ಮುಖಂಡ

ದಿನಗೂಲಿ ನಿರ್ವಹಿಸಿ ಬಡ ಕುಟುಂಬವನ್ನು ಸಲಹುತ್ತಿದ್ದ ಝುಬೈರ್ ಅವರ ಸಾವಿನಿಂದ ಕುಟುಂಬ ಕಂಗೆಟ್ಟು ಹೋಗಿದ್ದು, ಅಲ್ಲದೆ ಇದರಿಂದ ಝುಬೈರ್ ಅವರ ಶಾಲೆ ಮತ್ತು ಕಾಲೇಜಿಗೆ ತೆರಳುತ್ತಿರುವ ಮಕ್ಕಳ ವಿದ್ಯಾಭ್ಯಾಸದಲ್ಲಿ ಮೊಟಕುಗೊಳಿಸುವ ಸಾಧ್ಯತೆ ಇದೆ. ಇದನ್ನು ಗಮನದಲ್ಲಿಟ್ಟುಕೊಂಡ ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಮುನೀರ್ ಬಾವಾ ಹಾಜಿ ಅವರು ಝುಬೈರ್ ಅವರ ಆರು ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News