ಕರಾವಳಿಯಲ್ಲಿ ವಾಯುಭಾರ ಕುಸಿದಿಂದ ಗಾಳಿ ಸಹಿತ ಮಳೆ

Update: 2017-10-06 17:25 GMT

ಮಂಗಳೂರು, ಅ.6: ಹವಾಮಾನ ಇಲಾಖೆಯ ಮಾಹಿತಿಯಂತೆ ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯು ಭಾರ ಕುಸಿತದ ಪರಿಣಾಮವಾಗಿ ಕರಾವಳಿಯಾದ್ಯಂತ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ದ.ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು ಮಂಗಳೂರು ಸೇರಿದಂತೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಭಾಗದಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತವರಣವಿದ್ದು ರಾತ್ರಿ ವೇಳೆಗೆ ಮಳೆ ಗಾಳಿ ಸಹಿತ ಮಳೆ ಸುರಿಯಲಾರಂಭಿಸಿದೆ.

ವಾಯು ಭಾರ ಕುಸಿತದಿಂದ ರಾಜ್ಯಾದ್ಯಂತ ಕಳೆದ ಮೂರು ದಿನದಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು ಇನ್ನೂ ಮೂರು ದಿನ ಕರಾಳಿ ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಬೆಳ್ತಂಗಡಿಯಲ್ಲಿ ಗರಿಷ್ಠ ಪ್ರಮಾಣದ ಮಳೆಯಾಗಿದೆ ಸುಳ್ಯದಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಶುಕ್ರವಾರ ಸುರಿದ ಮಳೆಯ ಪ್ರಮಾಣ ಪುತ್ತೂರು -29.1ಮಿ.ಮೀ, ಬೆಳ್ತಂಗಡಿ-21.3 ಮಿ.ಮೀ, ಬಂಟ್ವಾಳ-6.5 ಮಿ.ಮೀ, ಮಂಗಳೂರು-8.9 ಮಿ.ಮೀ ಮಳೆಯಾಗಿದೆ. ಸುಳ್ಯದಲ್ಲಿ ಮಳೆಯಾದ ಬಗ್ಗೆ ವರದಿಯಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News