ವಿನಾಕಾರಣ ಹೆಸರು ತೆಗೆಯುವ, ಸೇರ್ಪಡೆಗೆ ಸತಾಯಿಸುವ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ರೈ

Update: 2017-10-07 14:39 GMT

ಬಂಟ್ವಾಳ, ಅ. 7: ಮತದಾರ ಪಟ್ಟಿಯಿಂದ ವಿನಾಕಾರಣ ಹೆಸರು ತೆಗೆಯುವ ಹಾಗೂ ಹೆಸರು ಸೇರ್ಪಡೆಗೆ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಪಾಣೆಮಂಗಳೂರು ಬ್ಲಾಕ್ ಸಮಿತಿ ವತಿಯಿಂದ ಮೆಲ್ಕಾರ್ ಬಿರ್ಲಾ ಸಭಾ ಭವನದಲ್ಲಿ ಶನಿವಾರ ನಡೆದ ಪಕ್ಷದ ವಲಯ ಅಧ್ಯಕ್ಷರು, ಬೂತ್ ಅಧ್ಯಕ್ಷರು ಮತ್ತು ಬೂತ್ ಮಟ್ಟದ ಏಜೆಂಟರ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಮತದಾರ ಪಟ್ಟಿ  ಪರಿಷ್ಕರಣೆಯಲ್ಲಿ ಯಾವುದೇ  ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಲು ಸಂಬಂಧಿತರಿಗೆ ಸೂಚಿಸಲಾಗಿದೆ. ಮತದಾನ ಎಲ್ಲಾ ಪ್ರಜೆಗಳ ಹಕ್ಕಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆಸಬೇಕು ಎಂದವರು ತಿಳಿಸಿದರು.

ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮಹಮ್ಮದ್, ಕೆ.ಕೆ.ಸಾಹುಲ್ ಹಮೀದ್, ಮಂಜುಳಾ ಮಾಧವ ಮಾವೆ, ರಾಜ್ಯ ಮಾಲಿನ್ಯ ಮಂಡಳಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್ ಮಾತನಾಡಿದರು.

ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಚಂಚಲಾಕ್ಷಿ, ಶರೀಫ್ ಶಾಂತಿಯಂಗಡಿ, ತಾ.ಪಂ. ಸದಸ್ಯರಾದ  ಸಂಜೀವ ಪೂಜಾರಿ, ಆದಂ ಕುಂಞ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಬುಡಾ ಸದಸ್ಯ ಲತೀಫ್ ಖಾನ್, ಪ್ರಮುಖರಾದ ರಾಜಶೇಖರ್ ನಾಯಕ್, ಉಮಾನಾಥ ಶೆಟ್ಟಿ, ರಫೀಕ್ ಆಲಡ್ಕ, ಮಹೇಶ್ ನಾಯಕ್, ವೆಂಕಪ್ಪ ಪೂಜಾರಿ, ಮಲ್ಲಿಕಾ ಪಕ್ಕಳ, ಮಹಮ್ಮದ್ ನಂದಾವರ, ಸಿದ್ದೀಕ್ ಸರಾವು ಮತ್ತಿತರರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾದ ನಿವೃತ್ತ ತಹಶೀಲ್ದಾರ್ ಮಲ್ಲೇಶ್ ಸ್ವಾಮಿ, ಪತ್ರಕರ್ತ ಎ. ಗೋಪಾಲ ಅಂಚನ್, ವಿಶ್ಲೇಷಕ ವಿಠಲ ಶೆಟ್ಟಿ ಮಾಹಿತಿ ನೀಡಿದರು. 

 ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಸ್ವಾಗತಿಸಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News