ಮಾನವ ಹಕ್ಕುಗಳ ಉಲ್ಲಂಘನೆ ವ್ಯಾಪಕ: ಪ್ರೊ.ಸುರೇಂದ್ರ ಶೆಟ್ಟಿ

Update: 2017-10-08 12:31 GMT

ಉಡುಪಿ, ಅ.8: ಮಾನವ ಹಕ್ಕುಗಳು ಯಾರ ಕೊಡುಗೆಯೂ ಅಲ್ಲ. ಮಾನವನಲ್ಲಿ ಅಂತರ್ಗತವಾಗಿರುವ, ಹುಟ್ಟಿನಿಂದ ಬರುವ ಹಕ್ಕುಗಳೇ ಮಾನವ ಹಕ್ಕುಗಳು. ಪ್ರಾಚೀನ ಭಾರತದಲ್ಲಿ ಮಾನವ ಹಕ್ಕುಗಳು ಜನಜೀವನದಲ್ಲಿ ಹಾಸುಹೊಕ್ಕಾಗಿತ್ತು. ಆದರೆ ಈಗ ಮಾನವ ಹಕ್ಕುಗಳ ಉಲ್ಲಂಘನೆ ವ್ಯಾಪಕ ವಾಗುತ್ತಿದೆ. ಆದುದರಿಂದ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಇಂದಿನ ಅಗತ್ಯ ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರ ಶೆಟ್ಟಿ ಹೇಳಿದ್ದಾರೆ.

ಉಡುಪಿಯ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸಂಘ ಹಾಗೂ ಮಾನವ ಹಕ್ಕುಗಳ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಲಾದ ಮಾನವ ಹಕ್ಕುಗಳ ಅರಿವು ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಜಗದೀಶ್ ರಾವ್ ಅಧ್ಯಕ್ಷತೆ ವಹಿಸಿ ದ್ದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಚಾಲಕ ಡಾ.ಗುರುರಾಜ ಪ್ರಭು ಉಪಸ್ಥಿತರಿದ್ದರು. ಮಾನವ ಹಕ್ಕುಗಳ ಸಂಘದ ಸಂಚಾಲಕ ಎನ್. ನಿತ್ಯಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಸುಚಿತ್ರ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಅಶೋಕ್ ಭಂಡಾರಿ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಅನಿಲ್ ಕುಮಾರ್ ರೈ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News