ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2017-10-08 16:57 GMT

ಮಂಗಳೂರು, ಅ. 8: ಕಾವೂರು-ಕೊಂಚಾಡಿ ರಸ್ತೆಯ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ರವಿವಾರ ಪತ್ತೆಯಾಗಿದೆ.

ಮೃತ ವ್ಯಕ್ತಿಯ ವಯಸ್ಸು 57 ವರ್ಷ ಎಂದು ಅಂದಾಜಿಸಲಾಗಿದೆ. ಸ್ಥಳದಲ್ಲಿ ಮೃತದೇಹ ಸಮೀಪದಲ್ಲಿಯೇ ಮರಕ್ಕೆ ನೈಲಾನ್ ಹಗ್ಗ ಕಟ್ಟಲಾಗಿದ್ದು, ಆತ್ಮಹತ್ಯೆಯೋ, ಕೊಲೆಯೋ ಎಂಬುದರ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ.

ರವಿವಾರ ಬೆಳಗ್ಗೆ ಕಸ ಗುಡಿಸುವ ಕಾರ್ಮಿಕರಿಗೆ ಸುತ್ತಮುತ್ತ ಪೊದೆಯಲ್ಲಿ ಕೆಟ್ಟ ವಾಸನೆ ಬರುತ್ತಿದ್ದು, ಹತ್ತಿರ ಹೋಗಿ ನೋಡಿದಾಗ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಮೃತದೇಹದ ಪಕ್ಕ ಹರಿದ ಐಡಿ, ಪಾನ್‌ಕಾರ್ಡ್ ಪತ್ತೆಯಾಗಿದ್ದು, ಅದರಲ್ಲಿ ‘ಗೋವಿಂದ’ ಎಂಬ ಹೆಸರಿದೆ. ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News