ಬಂಟ್ವಾಳ ಪುರಸಭೆ: ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ವಾಸುಪೂಜಾರಿ ಅವಿರೋಧ ಆಯ್ಕೆ

Update: 2017-10-10 11:47 GMT

ಬಂಟ್ವಾಳ, ಅ. 10: ನಾಲ್ಕು ವರ್ಷಗಳ ನಂತರ ಬಂಟ್ವಾಳ ಪುರಸಭೆಯ ಕೊನೆಯ ಒಂದು ವರ್ಷದ ಅವಧಿಗೆ 
ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‍ನ ವಾಸುಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾದರು.

ಉಳಿದಂತೆ ಸಮಿತಿಗೆ ಇತರ ಸದಸ್ಯರಾಗಿ ಜಗದೀಶ್ ಕುಂದರ್, ಚಂಚಲಾಕ್ಷಿ, ಪ್ರಭಾ ಆರ್. ಸಾಲಿಯಾನ್(ಕಾಂಗ್ರೆಸ್) ಮೋಹನ್ ಬಿ. (ಜೆಡಿಎಸ್), ಮೋನಿಶ್ ಆಲಿ (ಎಸ್‍ಡಿಪಿಐ)ರವರು ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಾಮಾನ್ಯ ಸಭೆ ಮುನ್ನ ಸ್ಥಾಯಿ ಸಮಿತಿ ಆಯ್ಕೆ ಪ್ರಕ್ರಿಯೆಯನ್ನು ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ನಡೆಸಿದರು.

ಇದೇ ವೇಳೆ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟುರವರು ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿಯವರನ್ನು ಅಭಿನಂದಿಸಿದರು.

ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಮುಹಮ್ಮದ್ ನಂದಾವರ, ಮಲ್ಲಿಕಾ ಶೆಟ್ಟಿಮೊದಲಾವರು ವಾಸುಪೂಜಾರಿಗೆ ಶುಭಹಾರೈಸಿದರು.

ಸ್ಥಾಯಿ ಸಮಿತಿ ಆಯ್ಕೆ ಪ್ರಕ್ರಿಯೆಯನ್ನು ಬಿಜೆಪಿ ಸದಸ್ಯರು ಬಹಿಷ್ಕರಿಸಿ, ಈ ಪ್ರಕ್ರಿಯೆ ಕಾನೂನುಬಾಹಿರ ಎಂದು ಆರೋಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News