ಕರಾವಳಿ ಉತ್ಸವ : ಕಲಾತಂಡಗಳಿಂದ ಅರ್ಜಿ ಆಹ್ವಾನ

Update: 2017-10-10 14:15 GMT

ಮಂಗಳೂರು, ಅ.10: ದಕ್ಷಿಣ ಕನ್ನಡ ಜಿಲ್ಲಾ ಕರಾವಳಿ ಉತ್ಸವ-2017ರನ್ನು ಡಿಸೆಂಬರ್ ತಿಂಗಳಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗುವುದು. ಕರಾವಳಿ ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು ಈ ಬಗ್ಗೆ ಪತ್ರಿಕಾ ವರದಿಗಳನ್ನೋಳಗೊಂಡ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವಸ್ಟೋರ್, ಮಂಗಳೂರು-575006 ಇವರಿಗೆ ಅ.30 ರೊಳಗೆ ತಲುಪಿಸಬೇಕು.

ಸಾಂಸ್ಕೃತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಕರಾವಳಿ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕೃತಿಕ ಸಮಿತಿಯಿಂದ ಆಯ್ಕೆಯಾದ ಕಲಾತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News