ಹಿರಿಯಡಕ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ

Update: 2017-10-11 17:42 GMT

ಉಡುಪಿ, ಅ.11: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇಲ್ಲಿನ ಯುವ ರೆಡ್‌ಕ್ರಾಸ್ ಘಟಕದ ವಿವಿಧ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ತರಬೇತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಉಡಪಿ ಇದರ ಉಪಾಧ್ಯಾಕ್ಷ ಡಾ. ಅಶೋಕ್ ಕುಮಾರ್ ವೈ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಯುವ ಸಮೂಹ ರೆಡ್‌ಕ್ರಾಸ್‌ನ ಸಾಮಾಜಿಕ ಕಾರ್ಯಗಳೊಂದಿಗೆ ಕೈಜೋಡಿಸಲು ಕರೆ ನೀಡಿದರು.

 ಕಾಲೇಜಿನ ಪ್ರಾಂಶುಪಾಲ ಪ್ರೊ.ಜಿ.ಆರ್. ರಾಯ್ಕರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿಯ ಜೂನಿಯರ್ ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಕೆ. ಜಯರಾವ್ ಆಚಾರ್ಯ ಹಾಗೂ ಡಾ.ರಾಮಚಂದ್ರ ಕಾಮತ್ ಭಾಗವಹಿಸಿದ್ದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ನಿಕಟ ಪೂರ್ವ ಸಂಚಾಲಕ ಸವಿತಾ, ವಿದ್ಯಾರ್ಥಿ ಪ್ರತಿನಿಧಿ ಕೀರ್ತಿ ಮತ್ತು ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕ ಸುಬಾಷ್ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು. ವಿದ್ಯಾರ್ಥಿನಿ ಆಶಾಲತಾ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಡಾ.ರಾಮಚಂದ್ರ ಕಾಮತ್ ಪ್ರಥಮ ಚಿಕಿತ್ಸೆ ಕುರಿತು ತರಬೇತಿಯನ್ನು ಪ್ರಾತ್ಯಕ್ಷಿಕೆಯೊಂದಿಗೆ ನಡೆಸಿಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News