ವಿಶ್ವ ವಿಕಲಚೇತನರ ದಿನಾಚರಣೆ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2017-10-12 16:25 GMT

ಉಡುಪಿ, ಅ.12: ಬೆಂಗಳೂರಿನಲ್ಲಿ ಡಿ.3ರಂದು ರಾಜ್ಯ ಮಟ್ಟದಲ್ಲಿ ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆಯ ಸಂದರ್ಭದಲ್ಲಿ ವಿಕಲಚೇತನರ ಸಬಲೀಕರಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ/ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉದ್ದೇಶಿಸಿದ್ದು, ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ, (ದೂರವಾಣಿ: 0820-2574810/811) ಇವರಿಂದ ಅಥವಾ ಇಲಾಖೆಯ ವೆಬ್‌ಸೈಟ್‌ನಿಂದ (www.welfareofdisabled.kar.nic.in, www.dwdsc.kar.nic.in) ಪಡೆದುಕೊಳ್ಳಬಹುದು. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅ. 25ರೊಳಗೆ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಚೇರಿ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News