ಬಂಟ್ವಾಳ: ಅಟೊರಿಕ್ಷಾ ಚಾಲಕರ, ಮಾಲಕರ ಸಂಘದ ವಾರ್ಷಿಕ ಸಭೆ

Update: 2017-10-14 15:38 GMT

ಬಂಟ್ವಾಳ, ಅ. 14: ವ್ಯವಸ್ಥೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸಂಘಟನೆಯಿಂದ ಮಾತ್ರ ಸಾಧ್ಯ. ಕಾನೂನಿನಡಿಯಲ್ಲಿ ಸಂಘಟನಾತ್ಮಕವಾಗಿ ಹೋರಾಟ ಮಾಡಿದಾಗ ತಮ್ಮ ಬೇಡಿಕೆಗಳನ್ನು ಈಡೇರಿಸಕೊಳ್ಳಬಹುದು ಎಂದು ಬಿಜೆಪಿ ಮುಖಂಡ ಉಳಿಪ್ಪಾಡಿಗುತ್ತು ರಾಜೇಶ್ ನಾಯಕ್ ಹೇಳಿದ್ದಾರೆ.

ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಬಿಎಂಎಸ್, ಬಂಟ್ವಾಳ ಅಟೊ ರಿಕ್ಷಾ ಚಾಲಕರ-ಮಾಲಕರ ಸಂಘದ 29ನೇ ವಾರ್ಷಿಕ ಮಹಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜವಬ್ದಾರಿಯನ್ನು ಅರಿತುಕೊಂಡು ಕೆಲಸ ನಿರ್ವಹಿಸುವುದರ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ರಾಜ್ಯಾಧ್ಯಕ್ಷ ವಿಶ್ವನಾಥ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಪುರಸಭಾ ಸದಸ್ಯ, ಬಂಟ್ವಾಳ ಅಟೊ ರಿಕ್ಷಾ ಚಾಲಕರ-ಮಾಲಕರ ಸಂಘದ ಗೌರವಾಧ್ಯಕ್ಷ ಗೋವಿಂದ ಪ್ರಭು, ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್ಸೈ ಬಾಲಕೃಷ್ಣ ಗೌಡ, ಸಂಘದ ಕಾನೂನು ಸಲಹೆಗಾರ ವಕೀಲ ಜಯರಾಮ ರೈ, ಎಸ್‌ವಿಎಸ್ ಕಾಲೇಜಿನ ಪ್ರೊ. ನಾರಾಯಣ ಭಂಡಾರಿ, ಬಂಟ್ವಾಳ ಅಟೊ ರಿಕ್ಷಾ ಚಾಲಕರ-ಮಾಲಕರ ಸಂಘದ ಅಧ್ಯಕ್ಷ ವಸಂತ ನಾವೂರ, ಜಿಲ್ಲಾ ಸಂಘದ ಕಾರ್ಯದರ್ಶಿ ಬಾಲಕೃಷ್ಣ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ರಿಕ್ಷಾ ಚಾಲಕ ಆನಂದ ಚೆಂಡ್ತಿಮಾರ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಸಲಹೆಗಾರ ಸದಾನಂದ ಗೌಡ ನಾವೂರ ಸ್ವಾಗತಿಸಿ, ವಂದಿಸಿದರು. ಉಮಾಶಂಕರ್ ಬಡ್ಡಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News