ಶಿರಿಯಾರ ಪಿಡಿಒ ಗಣಪ ಮೊಗವೀರ ಅಮಾನತು

Update: 2017-10-17 15:22 GMT

ಉಡುಪಿ, ಅ.17: ಶಿರಿಯಾರ ಗ್ರಾಪಂನ (ಪ್ರಸ್ತುತ ಹೆಗ್ಗುಂಜೆ ಗ್ರಾಪಂ) ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ (ಪಿಡಿಒ) ಗಣಪ ಮೊಗವೀರ ಅವರು, ಸರಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ, ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಾವಳಿಗಳು 1966 ನಿಯಮ (3)ನ್ನು ಉಲ್ಲಂಘಿಸಿರುವುದರಿಂದ ಕ.ನಾ.ಸೇವಾ ನಿಯಮಗಳನ್ವಯ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ಉಡುಪಿ ಜಿಪಂನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಶಿವಾನಂದ ಕಾಪಶಿ ಅವರು ತಕ್ಷಣದಿಂದ ಜ್ಯಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಮಾನತ್ತಿಲ್ಲಿರಿಸಿ ಆದೇಶ ಹೊರಡಿಸಿದ್ದಾರೆ.

ಅಮಾನತು ಅವಧಿಯಲ್ಲಿ ಗಣಪ ಮೊಗವೀರ ಇವರಿಗೆ ನಿಯಮಾನುಸಾರ ಜೀವನಾಧಾರ ಭತ್ಯೆಯನ್ನು ನೀಡಲಾಗುವುದು ಹಾಗೂ ಅಮಾನತು ಅವಧಿಯಲ್ಲಿ ಅವರು ಸಕ್ಷಮ ಪ್ರಾಧಿಕಾರದ ಲಿಖಿತ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗಣಪ ಮೊಗವೀರ ಅವರು ಶಿರಿಯಾರ ಗ್ರಾಪಂನ ಪಿಡಿಓ ಆಗಿದ್ದ ಸಂದರ್ಭದಲ್ಲಿ ಗ್ರಾಪಂನ ಅಂದಿನ ಅಧ್ಯಕ್ಷರಾಗಿದ್ದ ಜ್ಯೋತಿ ಅವರ ಸಹಿಯನ್ನು ಪೋರ್ಜರಿ ಮಾಡಿ ಹಲವು ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವುದಾಗಿ ಜ್ಯೋತಿ ಅವರು 2016ರ ಸೆ.22ರಂದು ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಗಣಪ ಮೊಗವೀರ ಅವರು ಶಿರಿಯಾರ ಗ್ರಾಪಂನ ಪಿಡಿಓ ಆಗಿದ್ದ ಸಂದರ್ದಲ್ಲಿಗ್ರಾಪಂನಅಂದಿನಅ್ಯಕ್ಷರಾಗಿದ್ದ ಜ್ಯೋತಿ ಅವರ ಸಹಿಯನ್ನು ಪೋರ್ಜರಿ ಮಾಡಿ ಹಲವು ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವುದಾಗಿ ಜ್ಯೋತಿ ಅವರು 2016ರ ಸೆ.22ರಂದು ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆಯ ವೇಳೆ ಗಣಪ ಮೊಗವೀರ ಅವರು ಶಿರಿಯಾರ ಗ್ರಾಪಂ ಅಧ್ಯಕ್ಷೆ ಜ್ಯೋತಿ ಸಹಿಯನ್ನು ಪೋರ್ಜರಿ ಮಾಡಿರುವುದು ಹಸ್ತಾಕ್ಷರ ತಜ್ಞರ ವರದಿಯಲ್ಲಿ ದೃಢಪಟ್ಟಿದ್ದರಿಂದ ಪಿಡಿಓ ಅವರನ್ನು ನ್ಯಾಯಾಲಯದ ಎದುರು ಅಭಿಯೋಜನೆ ಗೊಳಪಡಿಸಲು ಅಭಿಯೋಜನಾ ಮಂಜೂರಾತಿ ಆದೇಶವನ್ನು ನೀಡುವಂತೆ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕೋರಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿತ ನೌಕರರನ್ನು ನ್ಯಾಯಾಲಯದಲ್ಲಿ ಅಭಿಯೋಜನೆ ಗೊಳಪಡಿಸಲು ಮಂಜೂರಾತಿ ಆದೇಶವನ್ನು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕುಂದಾಪುರ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿಯಲ್ಲಿ ಸಲ್ಲಿಸಲಾಗಿತ್ತು.

ಈ ಪ್ರಕರಣದಲ್ಲಿ ಗಣಪ ಮೊಗವೀರ ವಿರುದ್ಧ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ದೋಷಾರೋಪಣಾ ಪಟ್ಟಿ ಸಲ್ಲಿಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮದಂತೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗಣಪ ಮೊಗವೀರ ಅವರ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿರುವುದರಿಂದ ಅವರನ್ನು ಸೇವೆಯಿಂದ ಅಮಾನತು ಗೊಳಿಸುವಂತೆ ಸಮತಾ ಸೈನಿಕ ದಳದ ಉಡುಪಿ ಜಿಲ್ಲಾ ಸಮಿತಿ ಕಳೆದ ತಿಂಗಳು ಜಿಪಂ ಸಿಇಓ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News