ತೋಡಿನ ನೀರಿನಲ್ಲಿ ಮುಳುಗಿ ಮೃತ್ಯು
Update: 2017-10-20 15:47 GMT
ಹಿರಿಯಡ್ಕ, ಅ.20: 41 ಶೀರೂರು ಗ್ರಾಮದ ಕೊಡ್ಸರಬೆಟ್ಟು ಎಂಬಲ್ಲಿ ತೋಡಿನಲ್ಲಿ ಸ್ನಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅ.19ರಂದು ಸಂಜೆ 6ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಕೊಡ್ಸರಬೆಟ್ಟುವಿನ ರಮೇಶ್ ನಾಯ್ಕ ಎಂಬವರ ಮಗ ಪ್ರವೀಣ ನಾಯ್ಕ ಎಂದು ಗುರುತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದ ಇವರು ಮನೆ ಬಳಿಯ ನೀರಿನ ತೋಡಿಗೆ ಸ್ನಾನ ಮಾಡಲು ಹೋಗಿದ್ದರು. ಆಗ ಅವರು ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟರು. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.