ಬಂಟ್ವಾಳ: 252.50 ಕೋ.ರೂ. ಅಭಿವೃದ್ದಿ ಯೋಜನೆಗಳಿಗೆ ಸಿಎಂ ಚಾಲನೆ

Update: 2017-10-22 11:37 GMT

ಬಂಟ್ವಾಳ, ಅ.22: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 252.50 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.

ಇಂದು ಪೂರ್ವಾಹ್ನ ಬಂಟ್ವಾಳಕ್ಕೆ ಆಗಮಿಸಿದ ಸಿದ್ದರಾಮಯ್ಯ ಮೊದಲಿಗೆ ಬಿ.ಸಿ.ರೋಡ್‌ನಲ್ಲಿ 90 ಸೆಂಟ್ಸ್ ವಿಸ್ತೀರ್ಣದ ಜಮೀನಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ತಲೆಯೆತ್ತಿರುವ ಮಿನಿ ವಿಧಾನಸೌಧವನ್ನು ಲೋಕಾರ್ಪಣೆಗೊಳಿಸಿದರು.

 ಬಿ.ಸಿ.ರೋಡ್‌ನಲ್ಲಿ 1.50 ಎಕರೆ ನಿವೇಶನದಲ್ಲಿ ಸುಮಾರು 10.7 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕೆ.ಎಸ್.ಆರ್.ಟಿ.ಸಿ. ನೂತನ ಬಸ್ಸು ನಿಲ್ದಾಣವನ್ನು ಉದ್ಘಾಟಿಸಿದರು.

ಇದೇ ಸಂದರ್ಭ ಒಟ್ಟು 148.29 ಕೋಟಿ ರೂ.ಗಳ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ 104.21 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿ ಚಾಲನೆ ನೀಡಿದರು.

ವೇದಿಕೆಯಲ್ಲಿ ಸಚಿವರಾದ ಬಿ.ರಮಾನಾಥ ರೈ, ಯು.ಟಿ.ಖಾದರ್, ಡಿ.ಕೆ.ಶಿವಕುಮಾರ್, ಎಚ್.ಸಿ.ಮಹಾದೇವಪ್ಪ, ರೋಶನ್ ಬೇಗ್, ಈಶ್ವರ ಬಿ., ಟಿ.ಬಿ.ಜಯಚಂದ್ರ, ಪ್ರಮೋದ್ ಮಧ್ವರಾಜ್, ಶಾಸಕರಾದ ಕೆ.ಅಭಯಚಂದ್ರ ಜೈನ್, ಐವನ್ ಡಿಸೋಜ, ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಮೊಯ್ದಿನ್ ಬಾವ, ಮೇಯರ್ ಕವಿತಾ ಸನಿಲ್, ಮಕ್ಕಳ ಆಯೋಗದ ಅಧ್ಯಕ್ಷೆ ಕೃಪಾ ಅಮರ್ ಆಳ್ವ, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News