ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2017-10-22 15:47 GMT

ಹಿರಿಯಡ್ಕ, ಅ.22: ಪೆರ್ಡೂರು ಹೋಳಿಂಜೆ ಗಾಣದ ಬೆಟ್ಟು ನಿವಾಸಿ ಕೃಷ್ಣ ಪೂಜಾರಿ(70) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಅ. 21 ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಕಲ್ಯಾ ಕೈರಬೆಟ್ಟು ನಿವಾಸಿ ಶ್ರೀಧರ ಪೂಜಾರಿ ಎಂಬವರು ಅ.21 ರಂದು ಸಂಜೆ  ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News