ಅ.29: ಪ್ರಧಾನಿ ಮೋದಿ ದ.ಕ.ಜಿಲ್ಲೆಗೆ

Update: 2017-10-25 16:25 GMT

ಮಂಗಳೂರು, ಅ.25: ಪ್ರಧಾನಮಂತ್ರಿ ನರೇಂದ್ರ ಮೋದಿ ಅ.29ರಂದು ದ.ಕ.ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಅಂದು ಬೆಳಗ್ಗೆ 10:15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ 10:20ಕ್ಕೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. 10:50ಕ್ಕೆ ಧರ್ಮಸ್ಥಳಕ್ಕೆ ತೆರಳಿ 11ಗಂಟೆಗೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಸಂದರ್ಶಿಸಲಿದ್ದಾರೆ. 11:45ಕ್ಕೆ ಉಜಿರೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು 1 ಗಂಟೆಗೆ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. 1:35ಕ್ಕೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News