ಬುಡೋಳಿ: ಬಸ್ ಪಲ್ಟಿ; ಇಬ್ಬರಿಗೆ ಗಾಯ

Update: 2017-10-26 04:37 GMT

ಬಂಟ್ವಾಳ, ಅ.26:ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಮಂಗಳೂರು ಮೂಲಕ ಉಡುಪಿಗೆ ತೆರಳುತ್ತಿದ್ದ ಬಸ್ ಇಂದು ಬೆಳಗಿನ ಜಾವ 5:30ರ ಸುಮಾರಿಗೆ ಬುಡೋಳಿ ತಿರುವಿನ ಬಳಿ  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಬಸ್ ನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಗೊಂದಲಕ್ಕೊಳಗಾದ ಪ್ರಯಾಣಿಕರು, ಬಸ್ ನ ಹಿಂಬದಿಯ ಗಾಜು ಒಡೆದು ಹೊರಕ್ಕೆ ಬಂದಿದ್ದಾರೆ.

ವಿಟ್ಲ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News