ಮಹಾದಾಯಿ ವಿವಾದ: ರಾಹುಲ್‌ಗಾಂಧಿ ಏಕೆ ಮಾತನಾಡುತ್ತಿಲ್ಲ?
ಸಾಗರ, ಡಿ.28: ಮಹಾದಾಯಿ ಯೋಜನೆ ಕಾಂಗ್ರೆಸ್‌ನ ಪಾಪದ ಕೂಸಾಗಿದೆ. ಯೋಜನೆಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಏಕೆ ಮಾತನಾಡುತ್ತಿಲ್ಲ. ಕಳೆದ 30 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದರೂ ಸಮಸ್ಯೆ ಬಗೆಹರಿಸದ ಕಾಂಗ್ರೆಸ್ ಸರಕಾರ ಈಗ ರಾಜಕೀಯ ದೊಂಬರಾಟ ಆಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗಾಂಧಿಮೈದಾನದಲ್ಲಿ ಗುರುವಾರ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪರಿವರ್ತನಾ ಯಾತ್ರೆಯ ಬಹಿರಂಗ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸಮಸ್ಯೆ ಪರಿಹಾರಕ್ಕೆ ಟ್ರಿಬ್ಯುನಲ್ ರಚಿಸಲಾಗಿತ್ತು. ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 100 ಕೋಟಿ ರೂ. ಬಿಡುಗಡೆ ಮಾಡಿ, ಕಾಲುವೆ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಎಂದು ತಿಳಿಸಿದರು.
ಮಹಾದಾಯಿ ನದಿನೀರು ಹಂಚಿಕೆಯ ಸಮಸ್ಯೆಗೆ ಪರಿಹಾರ ಸಂಬಂಧ ನವದಿಲ್ಲಿಯಿಂದಲೆ ತಾನು ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೆ. ಇದಕ್ಕೆ ಪೂರಕವಾಗಿ ಗೋವಾ ಮುಖ್ಯಮಂತ್ರಿಗಳು ಮಾನವೀಯತೆ ದೃಷ್ಟಿಯಿಂದ 7.5 ಟಿಎಂಸಿ ನೀರು ಬಿಡಲು ಒಪ್ಪಿಗೆ ನೀಡಿದ್ದರು. ಆದರೆ ಕರ್ನಾಟಕ ಸರಕಾರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅದಕ್ಕೂ ಕಲ್ಲು ಹಾಕಿ, ಈಗ ಮುಖ್ಯಮಂತ್ರಿಗು ನಾಟಕ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಆರ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಿಜೆಪಿ ವಕ್ತಾರ ಸುರೇಶಕುಮಾರ್, ಶಾಸಕ ರಾಘವೇಂದ್ರ, ವಿಜಯಕುಮಾರ್, ಮತ್ತಿತರರಿದ್ದರು.