ಮಹಾದಾಯಿ ವಿವಾದ: ಪ್ರಧಾನಿ ಮಧ್ಯಪ್ರವೇಶಕ್ಕೆ ಲೋಕಸಭೆಯಲ್ಲಿ ಕಾಂಗ್ರೆಸ್ ಆಗ್ರಹ

Update: 2018-01-02 09:38 GMT

   ಹೊಸದಿಲ್ಲಿ, ಜ.2: ‘‘ರಾಜ್ಯದ ಜನರಿಗೆ ಕುಡಿಯುವ ನೀರು ಪೂರೈಸುವ ಮಹಾದಾಯಿ ಹಾಗೂ ಮೇಕೆದಾಟು ಯೋಜನೆ ಜಾರಿಗೆ ಎದುರಾಗಿರುವ ಅಡೆ-ತಡೆ ನಿವಾರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕು. 1980ರಲ್ಲಿ ಇಂದಿರಾಗಾಂಧಿ ಎಡು ರಾಜ್ಯಗಳ ನಡುವೆ ಕುಡಿಯುವ ನೀರಿನ ಸಮಸ್ಯೆ ಎದುರಾದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಿದ್ದರು’’ ಎಂದು ತುಮಕೂರಿನ ಕಾಂಗ್ರೆಸ್ ಸಂಸದ ಮುದ್ದೆ ಹನುಮೇಗೌಡ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

ಇದಕ್ಕೆ ಉತ್ತರ ನೀಡಿದ ಸಂಸದೀಯ ವ್ಯವಹಾರ ಸಚಿವ ಅನಂತ್‌ಕುಮಾರ್, ‘‘ಮಹಾದಾಯಿ ನದಿಯಿಂದ ಕುಡಿಯುವ ನೀರು ಬಿಡುಗಡೆಗೆ ಸಂಬಂಧಿಸಿ ಗೋವಾ ಸಿಎಂ ಮನೋಹರ್ ಪಾರಿಕ್ಕರ್ ಈಗಾಗಲೇ ಕರ್ನಾಟಕ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಬೇಕು’’ ಎಂದು ಹೇಳಿದರು.

ಪ್ರಧಾನಿ ಮಧ್ಯಪ್ರವೇಶದ ಬಗ್ಗೆ ಮಾತನಾಡದೇ ಸಿದ್ದರಾಮಯ್ಯ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಹೇಳಿರುವ ಅನಂತ್‌ಕುಮಾರ್ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್ ಸಂಸದರು ವಾಗ್ವಾದ ನಡೆಸಿದ್ದು, ಸದನದಲ್ಲಿ ಗದ್ದಲದ ವಾತಾವರಣ ಕಂಡುಬಂತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News