ಮಂಡ್ಯ: ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಡಿಸಿ ಸೂಚನೆ

Update: 2018-01-08 17:23 GMT

ಮಂಡ್ಯ, ಜ,8: ಜಿಲ್ಲಾದ್ಯಂತ ಅನಧಿಕೃತವಾಗಿ ಹಾಕಲಾಗಿರುವ ಫ್ಲೆಕ್ಸ್, ಬ್ಯಾನರ್‍ಗಳನ್ನು ಶೀಘ್ರ ತೆರವುಗೊಳಿಸದಿದ್ದರೆ ಕಾನೂನು ಕ್ರಮ ಕೈಗೊಳಲಾಗುವುದು ಎಂದು  ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

ಪ್ಲೆಕ್ಸ್ ಹಾಗು ಬ್ಯಾನರ್ ಪರವಾನಗಿ ಕುರಿತು ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ, ನಗರ, ಪುರಸಭೆ ಹಾಗು ಗ್ರಾಮ ಪಂಚಾಯತ್ ಗಳಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದರು.

ನಗರದ ಸೌಂದರ್ಯ, ಪರಿಸರ ಮಾಲಿನ್ಯಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ನಗರದ ಅನಧಿಕೃತ ಫ್ಲೆಕ್ಸ್ಗಳನ್ನು ಎರಡು ದಿನದೊಳಗೆ ಪೊಲೀಸರ ಸಹಾಯದಿಂದ ತೆರವುಗೊಳಿಸಬೇಕು. ಅನಧಿಕೃತವಾಗಿ ಹಾಕಿರುವವರಿಗೆ ದಂಡ ವಿಧಿಸಬೇಕು ಎಂದು ಸೂಚಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ತಮ್ಮ ಇಲಾಖೆ ಅನುಮತಿ ಪಡೆಯದೆ ಬ್ಯಾನರ್, ಪ್ಲೆಕ್ಸ್ ಅಳವಡಿಸುವಂತಿಲ್ಲ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ಸಂಘಟನೆ ಜತೆ ಸೇರಿಕೊಂಡು ಚುನಾವಣಾ ಪ್ರಚಾರ ಹಾಗು ಪ್ರತಿಭಟನೆ ಮಾಡಬಾರದು. ಮಹಿಳಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಸಮಸ್ಯೆಯನ್ನು ತಿಳಿಸಲು ಪಿಂಕ್ ಬಾಕ್ಸ್ ಗಳನ್ನು ಅಳವಡಿಸಲಾಗುವುದು ಎಂದರು.

ಜಿಪಂ ಸಿಇಓ ಬಿ.ಶರತ್, ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ಇತರೆ ಅಧಿಕಾರಿ ಮತ್ತು ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News