ಮಡಿಕೇರಿ: ಅಜ್ಜಮಾಡ ರಮೇಶ್ ಕುಟ್ಟಪ್ಪಗೆ ಅಕಾಡೆಮಿ ಪ್ರಶಸ್ತಿ

Update: 2018-01-25 11:18 GMT

ಮಡಿಕೇರಿ,ಜ.25: ಕರ್ನಾಟಕ ಮಾಧ್ಯಮ ಅಕಾಡೆಮಿ ನೀಡುವ 2017ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ವಿಜಯವಾಣಿ ಹಿರಿಯ ವರದಿಗಾರ ಅಜ್ಜಮಾಡ ರಮೇಶ್ ಕುಟ್ಟಪ್ಪ ಸ್ವೀಕರಿಸಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ರಾತ್ರಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಗೃಹ ಸಚಿವ ರಾಮಲಿಂಗಾರೆಡ್ಡಿ, ಖ್ಯಾತ ಸಾಹಿತಿ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು ಪ್ರಶಸ್ತಿ ಪ್ರಧಾನ ಮಾಡಿದರು. ರಾಜ್ಯದ ಒಟ್ಟು 40 ಹಿರಿಯ ಪತ್ರ ಕರ್ತರಿಗೆ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ನೀಡಲಾಯಿತು. ತಲಾ 20 ಸಾವಿರ ನಗದು, ಆಕರ್ಷಕ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.

ಡಾ.ಬರಗೂರು ರಾಮಚಂದ್ರಪ್ಪ ಅವರಿಗೆ ತಳ ಸಮುದಾಯದ ಬಗೆಗಿನ ಬರಹಗಳ ಅಂಕಣಕಾರರಿಗೆ ನೀಡುವ ಡಾ.ಬಿ.ಆರ್. ಅಂಬೇಡ್ಕರ್ ಮೂಕನಾಯಕ ಪ್ರಶಸ್ತಿ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News