ಝೈಬುನ್ನೀಸ ಸಾವು ಪ್ರಕರಣ : ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಎಸ್‍ಡಿಪಿಐ ಪ್ರತಿಭಟನೆ

Update: 2018-01-28 17:21 GMT

ಶಿವವೊಗ್ಗ, ಜ. 28: ಮೈಸೂರಿನ ಕೆ.ಆರ್.ಪೇಟೆ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆಯಲ್ಲಿ ನಡೆದ ವಿದ್ಯಾರ್ಥಿನಿ ಝೈಬುನ್ನೀಸ ಸಾವು ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕು. ತಪ್ಪಿತಸ್ಥರ ವಿರುದ್ದ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಪಕ್ಷವು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ. 

ಈ ಸಂಬಂಧ ಸಂಘಟನೆಯ ಕಾರ್ಯಕರ್ತರು ಶನಿವಾರ ಸಂಜೆ ಶಿವಮೊಗ್ಗ ನಗರದ ಬಸ್ ನಿಲ್ದಾಣದಿಂದ ಗೋಪಿ ವೃತ್ತದವರೆಗೆ ಮೇಣದ ಬತ್ತಿ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ನಂತರ ವೃತ್ತದಲ್ಲಿಯೇ ಸಾಂಕೇತಿಕವಾಗಿ ಪ್ರತಿಭಟನಾ ಸಭೆ ನಡೆಸಿದರು. 

ತಕ್ಷಣವೇ ರಾಜ್ಯ ಸರ್ಕಾರ ಝೈಬುನ್ನೀಸ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕು. ತಪ್ಪಿತಸ್ಥರ ವಿರುದ್ದ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು. ಬಾಲಕಿಯ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. 

ಪ್ರತಿಭಟನೆಯಲ್ಲಿ ಸಂಘಟನೆಯ ಅಧ್ಯಕ್ಷ ಕೆ.ಬಿ.ಬಷೀರ್, ಅಹಮದ್ ಜೀಲಾನ್, ರಜಾಖಾನ್, ಶಹರಾಜ್ ಮುಜಾಹಿದ್, ಸಿದ್ದಿಕ್ಕಿ, ಮಹಮದ್ ಖಲೀಮ್‍ವುಲ್ಲಾ, ಇಸಾಕ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News