ಮಡಿಕೇರಿ: ರಾಷ್ಟ್ರ ಗೀತೆ ಗಾಯನ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Update: 2018-01-28 17:46 GMT

ಮಡಿಕೇರಿ, ಜ.28 : ಫೀ.ಮಾ. ಕಾರ್ಯಪ್ಪ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಡೆದ ರಾಷ್ಟ್ರಗೀತೆ ಗಾಯನ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಬಾಲಕರ ತಂಡ, ಸಂತ ಜೋಸೆಫರ ಶಾಲೆ ಮತ್ತು ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ತಂಡ ಅನುಕ್ರಮವಾಗಿ ಮೊದಲ ಮೂರು ಬಹುಮಾನಗಳನ್ನು ಪಡೆದುಕೊಂಡವು.

ಪ್ರೌಢ ಶಾಲಾ ವಿಭಾಗದಲ್ಲಿ ಅಮ್ಮತ್ತಿ ಪ್ರೌಢ ಶಾಲಾ ಬಾಲಕಿಯರ ತಂಡ ಪ್ರಥಮ, ಕೊಟ್ಟಮುಡಿಯ ಮರ್ಕಝ್ ಪ್ರೌಢಶಾಲಾ ತಂಡ ದ್ವಿತೀಯ ಮತ್ತು ಮಡಿಕೇರಿಯ ಜನರಲ್ ತಿಮ್ಮಯ್ಯ ಶಾಲಾ ಬಾಲಕಿಯರ ತಂಡ  ತೃತೀಯ ಸ್ಥಾನ ಪಡೆದುಕೊಂಡಿತು.

ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಮೂರ್ನಾಡು ಪಪೂ ಕಾಲೇಜು ಬಾಲಕಿಯರ ತಂಡ, ಮಡಿಕೇರಿ ಸರಕಾರಿ ಪಪೂ ಕಾಲೇಜು ತಂಡ ಮತ್ತು ಮದೆ ಮಹೇಶ್ವರ ಪಪೂ ಕಾಲೇಜು ಬಾಲಕಿಯರ ತಂಡ ಮೊದಲ ಮೂರು ಬಹುಮಾನಗಳನ್ನು ಪಡೆದುಕೊಂಡವು.

ಪದವಿ ಕಾಲೇಜು ವಿಭಾಗದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಬಾಲಕಿಯರ ತಂಡ ಪ್ರಥಮ, ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೇಂಜರ್ಸ್ ತಂಡ ದ್ವಿತೀಯ ಮತ್ತು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಬಾಲಕರ ತಂಡ ತೃತೀಯ ಬಹುಮಾನ ಪಡೆದುಕೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News