ಶ್ರೀನಗರ ಬಂದ್: ಜನಜೀವನ ಅಸ್ತವ್ಯಸ್ತ

Update: 2018-01-28 18:12 GMT

ಶ್ರೀನಗರ, ಜ. 28: ಶೋಪಿಯಾನ ಜಿಲ್ಲೆಯಲ್ಲಿ ಸೇನೆ ಹಾರಿಸಿದ ಗುಂಡಿಗೆ ಇಬ್ಬರು ಯುವಕರು ಸಾವನ್ನಪ್ಪಿರುವುದನ್ನು ಪ್ರತಿಭಟಿಸಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಬಂದ್‌ನಿಂದ ರವಿವಾರ ಕಾಶ್ಮೀರದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ ಹಾಗೂ ನಾಲ್ಕು ಜಿಲ್ಲೆಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಂಡಿದೆ. ಕಾಶ್ಮೀರದ ವಿವಿಧ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿವೆ.

ಬಂದ್‌ನ ಹಿನ್ನೆಲೆಯಲ್ಲಿ ಸಾರ್ವಜನಿಕ ವಾಹನಗಳು ರಸ್ತೆಗಿಳಿಯಲಿಲ್ಲ. ಆದರೆ, ಖಾಸಗಿ ಕಾರುಗಳು ನಗರದ ಕೆಲವೆಡೆ ಸಂಚರಿಸುತ್ತಿದ್ದುದು ಕಂಡುಬಂತು. ಈ ನಡುವೆ ಕಾನೂನು ಸುವ್ಯವಸ್ಥೆ ಕಾಪಾಡಲು ನಗರದ ಸಫಕಾದಲ್, ಖನ್ಯಾರ್, ನೌಹಟ್ಟಾ, ರೈನ್‌ವಾರಿ ಹಾಗೂ ಎಂ.ಆರ್. ಗುನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನರ ಚಲನವಲನದ ಮೇಲೆ ನಿರ್ಬಂಧ ಹೇರಲಾಗಿದೆ. ಶೋಪಿಯಾನ ಜಿಲ್ಲೆಯ ಗನೋಪೋರಾದಲ್ಲಿ ಶನಿವಾರ ಕಲ್ಲು ತೂರಾಟ ನಡೆಸಿದ ಗುಂಪಿನ ಮೇಲೆ ಸೇನಾ ಪಡೆ ಯೋಧರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದರು ಹಾಗೂ ಹಲವರು ಗಾಯಗೊಂಡಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News