ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ: ಗಾಂಧಿ ಸ್ಮಾರಕ ನಿರ್ಮಾಣಕ್ಕೆ ಮನವಿ

Update: 2018-01-30 18:04 GMT

ಮಡಿಕೇರಿ, ಜ.30 :ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನಾಚರಣೆಯನ್ನು ನಗರದಲ್ಲಿ ಆಚರಿಸಲಾಯಿತು.    

ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ. ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಯಲ್ಲಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪದಲ್ಲಿರಿಸಿ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು.  

ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. 

ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು.    

ಸರ್ವೋದಯ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಗಾಂಧಿ ಮಂಟಪದ ಬಳಿ ಮಹಾತ್ಮ ಗಾಂಧೀಜಿಯವರ ‘ಸ್ಮಾರಕ ಭವನ’ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಕಾರ್ಯರೂಪಕ್ಕೆ ಬರಬೇಕಿದೆ ಎಂದು ತಿಳಿಸಿದರು

ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಸರ್ವೋದಯ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ನಗರಸಭೆ ಸದಸ್ಯರಾದ ವೆಂಕಟೇಶ್, ಸರ್ವೋದಯ ಸಮಿತಿ ಸದಸ್ಯರಾದ ಕೋಡಿ ಚಂದ್ರಶೇಖರ್, ಅಂಬೆಕಲ್ ಕುಶಾಲಪ್ಪ, ಅಂಬೆಕಲ್ ನವೀನ್, ಸುಬ್ರಹ್ಮಣಿ, ಎಸ್.ಪಿ.ವಾಸುದೇವ, ಪಳಂಗಪ್ಪ, ಬಿ.ಎ.ರಾಮಯ್ಯ, ಜಿ.ಸಿ.ರಮೇಶ್, ಗಾಂಧಿ ಸ್ಮಾರಕ ಸಮಿತಿ ಸದಸ್ಯರಾದ ಕೆ.ಟಿ.ಬೇಬಿಮ್ಯಾಥ್ಯೂ, ಷಂಶುದ್ದಿನ್, ಜಿಲ್ಲಾ ಖಜಾನಾಧಿಕಾರಿ ಸತೀಶ್, ತಹಶೀಲ್ದಾರ್ ಕುಸುಮ, ಕನ್ನಡ ಮತ್ತು ಸಂಸ್ಕರತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಸಂಪತ್ ಕುಮಾರ್, ನಗರಸಭೆಯ ಅಧಿಕಾರಿ ರಮೇಶ್ ಮತ್ತಿತರರಿದ್ದರು.                  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News