ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿ : ಆರ್.ಪ್ರಸನ್ನಕುಮಾರ್

Update: 2018-02-02 12:13 GMT

ಶಿವಮೊಗ್ಗ, ಫೆ. 2: ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಾಗಲಿದೆ ಎಂದು ಎಂದು ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

ನಗರದ ಎನ್‍ಇಎಸ್ ಮೈದಾನದಲ್ಲಿ ಶುಕ್ರವಾರ ನ್ಯಾಷನಲ್ ಕ್ರಿಕೆಟ್ ಕಪ್ ವತಿಯಿಂದ ಏರ್ಪಡಿಸಿದ್ದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನ ಅಮೂಲ್ಯವಾದುದು. ಪಠ್ಯದ ಜೊತೆಗೆ ಆಟದಲ್ಲೂ ಭಾಗವಹಿಸುವುದು ಅತಿ ಮುಖ್ಯ. ಸೋಲು ಗೆಲುವು ಏನೇ ಇರಲಿ. ಎಲ್ಲವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿ ಜೀವನದ ಆಟ ಪಾಠಗಳು ಜೀವನದುದ್ದಕ್ಕೂ ಖುಷಿ ತರುವಂತಹದ್ದು, ವಿದ್ಯಾರ್ಥಿ ಜೀವನ ಗೋಲ್ಡನ್ ಲೈಫ್ ಆಗಿದ್ದು, ವಿದ್ಯೆಯ ಜೊತೆಗೆ ಬದುಕು ಕಟ್ಟಿಕೊಳ್ಳುವ ಕಲೆಯನ್ನು ಕಲಿಯಬೇಕು. ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಉತ್ತಮ ಗುಣ ನಡತೆಗಳನ್ನು ರೂಢಿಸಿಕೊಳ್ಳಬೇಕು. ಆಟದಿಂದ ಸಂಘಟನೆಯ ಗುಣಗಳು ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ದೇವಿಕುಮಾರ್, ಯುವ ಕಾಂಗ್ರೆಸ್ ಮಧು, ದರ್ಶನ್, ಸಚಿನ್, ಸೂರಜ್, ಚೇತನ್ ರಾಜ್ ಮೊದಲಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News