ಫೆ.14 ರಂದು ಮಂಗಳೂರಿನಲ್ಲಿ ಬ್ಯಾರಿ ಕಾವ್ಯ ರಚನಾ ಕಮ್ಮಟ

Update: 2018-02-03 15:36 GMT

ಚಿಕ್ಕಮಗಳೂರು, ಫೆ.3: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಫೆ.14ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆ ತನಕ ಮಂಗಳೂರಿನ ಎ.ಬಿ.ಶೆಟ್ಟಿ ಸರ್ಕಲ್ ಬಳಿಯಿರುವ ನಾಸಿಕ್ ಬಿ.ಎಚ್. ಬಂಗೇರ ಸಭಾ ಭವನದಲ್ಲಿ ಕಾವ್ಯ ರಚನಾ ಕಮ್ಮಟ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕೆ.ಮಹಮ್ಮದ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಮ್ಮಟವನ್ನು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಡಾ. ಸತ್ಯನಾರಾಯಣ ಮಲ್ಲಿಪಟ್ನ ಹಾಗೂ ಬಹುಭಾಷಾ ಕವಿ ಮುಹಮ್ಮದ್ ಬಡ್ಡೂರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯು.ಕೆ. ಮೋನು ಕಣಚೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಶಿಬಿರದ ಕೊನೆಯಲ್ಲಿ ಕವನ ರಚನಾ ಸ್ಪರ್ಧೆ ನಡೆಯಲಿದ್ದು ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲಾ ಪ್ರತಿನಿಧಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು.

ಆಸಕ್ತರು ಫೆ.10ರ ಒಳಗಾಗಿ ದೂರವಾಣಿ ಸಂಖ್ಯೆ ಮೂಲಕ ನೋಂದಣಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 0824-2412297, 9449842186 ಸಂಪರ್ಕಿಸಬಹುದು ಎಂದು ಅಕಾಡೆಮಿ ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News