ರಾಹುಲ್ ಪ್ರವಾಸಕ್ಕೆ ಶಾ ಕೌಂಟರ್

Update: 2018-02-08 08:04 GMT

ಹೊಸದಿಲ್ಲಿ, ಫೆ.8: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರವಾಸದ ಬೆನ್ನಲ್ಲೇ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ.18, 19 ಮತ್ತು 20ರಂದು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಫೆ.18ರಂದು ಮಂಗಳೂರಿಗೆ ಭೇಟಿ ನೀಡಲಿರುವ ಶಾ ಅವರು ರಾತ್ರಿ ಕುಕ್ಕೆ ಸುಬ್ರಹ್ಮಣ್ಯ ಮಠದಲ್ಲಿ ರಾತ್ರಿ ತಂಗಲಿದ್ದಾರೆ.  ಫೆ.19ರಂದು ಸುರತ್ಕಲ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿರುವರು.

ಫೆ.20ರಂದು ಹೊನ್ನಾವರದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪರೇಶ್ ಮೇಸ್ತಾ ಮನೆಗೆ ಭೇಟಿ ನೀಡಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಫೆ.10ರಂದು ಭೇಟಿ ನೀಡಲಿದ್ದಾರೆ. ಆ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ  ಅವರು ರಾಜ್ಯಕ್ಕೆಭೇಟಿ  ನೀಡುವರು.

ಗುಜರಾತ್ ಚುನಾವಣೆಯ  ವೇಳೆ ಕೈಗೊಂಡಿದ್ದ  'ಟೆಂಪಲ್ ರನ್ ' ರಾಜಕೀಯ  ಕರ್ನಾಟದಲ್ಲೂ ಮುಂದಿನ ಚುನಾವಣೆ ವೇಳೆ ಕಂಡು ಬರಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News