ಪ್ರಧಾನಿ ಮೋದಿ ಬಸವಣ್ಣನ ತತ್ವಗಳನ್ನು ಪಾಲಿಸಿಲ್ಲ:ರಾಹುಲ್ ಗಾಂಧಿ

Update: 2018-02-11 14:15 GMT

ಕೊಪ್ಪಳ, (ಕಾರಟಗಿ), ಫೆ,11: ಪ್ರಧಾನಿ ನರೇಂದ್ರ ಮೋದಿ ಬಸವಣ್ಣನನ್ನು ಬಾಯಿ ಮಾತಿನಲ್ಲಿ ಆರಾಧನೆ ಮಾಡುತ್ತಾರೆ ವಿನಃ, ಅವರ ತತ್ವಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಕಾರಟಗಿಯಲ್ಲಿ ಕೆಪಿಸಿಸಿ ಹಮ್ಮಿಕೊಂಡ ಕೊಂಡಿದ್ದ, ಜನಾಶೀರ್ವಾದ ಯಾತ್ರೆ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಸವಣ್ಣ ಅವರ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಅನ್ನಭಾಗ್ಯ, ಸಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ಸು ಕಂಡಿದೆ.ಆದರೆ, ಪ್ರಧಾನಿ ಮೋದಿ ಅವರು ಬಾಯಿ ಮಾತಿನಲ್ಲಿ ಬಸವಣ್ಣ ರನ್ನು ನೆನಪು ಮಾಡಿಕೊಳ್ಳುತ್ತಾರೆ ವಿನಃ, ಅವರ ಒಂದು ತತ್ವವನ್ನು ಪಾಲಿಸಿಲ್ಲ.

ಬಸವಣ್ಣ ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ.ಆದರೆ, ಮೋದಿ ಉದ್ಯೋಗ ಸೃಷ್ಟಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದ ಅವರು, ಭ್ರಷ್ಟರನ್ನು ತಮ್ಮ ಪಕ್ಷದಲ್ಲಿಟ್ಟುಕೊಂಡು, ರಾಜ್ಯ ಸರಕಾರದ ಮೇಲೆ ಆರೋಪ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ರಾಜ್ಯ ಸರಕಾರ ಎಲ್ಲ ಸಮುದಾಯಗಳ ಪರವಾಗಿದೆ.ಅಭಿವೃದ್ಧಿಯಲ್ಲಿ ದೇಶಕ್ಕೆ ಮಾದರಿಯಾಗಿದೆ.ಇಂತಹ ಪಕ್ಷವನ್ನು ಮತ್ತೊಮ್ಮೆ ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ.ಪ್ರಧಾನಿ ಮೋದಿಯ ಸುಳ್ಳು ಭರವಸೆಗಳ ಮೇಲೆ ನಂಬಿಕೆ ಇಟ್ಟುಕೊಳ್ಳಬಾರದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News