ಶಿವಮೊಗ್ಗ: ಅಪರಿಚಿತ ವಾಹನ ಢಿಕ್ಕಿ; ಬೈಕ್ ಸವಾರ ಮೃತ್ಯು

Update: 2018-02-13 16:59 GMT

ಶಿವಮೊಗ್ಗ, ಫೆ. 13: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಹೊರವಲಯ ವಡ್ಡಿನಕೊಪ್ಪ ಗ್ರಾಮದ ಬಳಿ ನಡೆದಿದೆ. 

ವಿನೋಬನಗರದ ನಿವಾಸಿ, ಖಾಸಗಿ ಶಾಲೆಯೊಂದರ ನೌಕರ ಸಹದೇವ (48) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ಕಾರ್ಯನಿಮಿತ್ತ ಬಿ.ಆರ್.ಪ್ರಾಜೆಕ್ಟ್‍ಗೆ ತೆರಳಿದ್ದರು. ನಂತರ ಶಿವಮೊಗ್ಗಕ್ಕೆ ಹಿಂದಿರುಗುವ ವೇಳೆ ಯಾವುದೋ ವಾಹನ ಇವರ ಬೈಕ್‍ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News