ರಾಜ್ಯದಲ್ಲಿ ಆತ್ಮಹತ್ಯೆಗೆ ಶರಣಾದ 3,667 ರೈತ ಕುಟುಂಬಗಳಿಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

Update: 2018-02-22 07:19 GMT

ಬೆಂಗಳೂರು, ಫೆ.22: ರಾಜ್ಯದಲ್ಲಿ ಈ ವರೆಗೆ 3,781 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 3,667 ಸಂತ್ರಸ್ತ ರೈತ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಇಂದು ತಿಳಿಸಿದರು.

ರಾಜ್ಯಪಾಲರ ಭಾಷಣಕ್ಕೆ  ವಂದನೆ ಸಲ್ಲಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ  ಅವರು ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ನಿಜ. ಎಲ್ಲರ ಕಾಲದಲ್ಲೂ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದರು.

ತಮ್ಮ ಸರಕಾರ  ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿದೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News