ಮಡಿಕೇರಿ; ಪಿಯುಸಿ ಪರೀಕ್ಷೆ ಅರಂಭ : 6210 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

Update: 2018-03-01 16:28 GMT

ಮಡಿಕೇರಿ, ಮಾ.1:ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಬಾಲಕಿಯರು 3251 ಮತ್ತು 2959 ಬಾಲಕರು ಸೇರಿದಂತೆ ಒಟ್ಟು 6210 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.   

ಗೋಣಿಕೊಪ್ಪಲುವಿನ ಕಾವೇರಿ ಪದವಿ ಪೂರ್ವ ಕಾಲೇಜು, ನಾಪೋಕ್ಲುವಿನ ಸರಕಾರಿ ಪದವಿ ಪೂರ್ವ ಕಾಲೇಜು, ಪೊನ್ನಂಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜು, ಸೋಮವಾರಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜು, ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಶನಿವಾರಸಂತೆ  ಪದವಿ ಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಪದವಿ ಪೂರ್ವ ಕಾಲೇಜು, ನೆಲ್ಯಹುದಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜು, ಕೂಡಿಗೆ ಸರಕಾರಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಈ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ದ್ವಿತೀಯ ಪಿಯು ಪರೀಕ್ಷೆಯನ್ನು ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಿ.ಸಿ.ಜಯದೇವಯ್ಯ ಅವರು ತಿಳಿಸಿದ್ದಾರೆ.  

ಪರೀಕ್ಷಾ ಅವಧಿಯ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನೀತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.   

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಯಾವುದೇ ಸಭಾ ಕಾರ್ಯಕ್ರಮ ಮತ್ತು ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷೆಗಳು ಮಾ.17 ರವರೆಗೆ ನಡೆಯಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News