ವಿರಾಜಪೇಟೆ: ಕಾಡಾನೆ ದಾಳಿಗೆ ಕಾರ್ಮಿಕ ಬಲಿ

Update: 2018-03-10 11:23 GMT

ವಿರಾಜಪೇಟೆ,ಮಾ.10: ತಾಲೂಕಿನ ಚೆನ್ನಯ್ಯ ನ ಕೋಟೆ ಸಮೀಪದ ಕಾಫಿ ತೋಟವೊಂದರಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ತೋಟದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಕಲಗೂಡು ಮೂಲದ ರುದ್ರಪ್ಪ (55) ಎಂದು ಗುರುತಿಸಲಾಗಿದ್ದು, ಕಳೆದ ಹಲವು ವರ್ಷಗಳಿಂದ ಕಾಫಿ ತೋಟದಲ್ಲಿ ಮಕ್ಕಳೊಂದಿಗೆ ಕೆಲಸ ನಿರ್ವಹಿಸುತ್ತಿದ್ದ ಇವರು, ಮನೆಗೆ ಸಾಮಗ್ರಿ ಖರೀದಿಸಿ ತೋಟದ ಲೈನ್ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿ ಶ್ರೀಪತಿ ,ಸಿದ್ದಾಪುರ ಠಾಣಾಧಿಕಾರಿ ಸುಬ್ರಮಣಿ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ಜೆಡಿಎಸ್ ಅಧ್ಯಕ್ಷ  ಸಂಕೇತ್ ಪೂವಯ್ಯ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದ್ದು, 42 ಕಾರ್ಮಿಕ ಜೀವಗಳು ಇದುವರೆಗೆ ಬಲಿಯಾಗಿದೆ. ರೈತರು ಬೆಳೆದ ಫಸಲುಗಳು ನಾಶವಾಗಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಜನರು ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಮಂತ್ರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದಲ್ಲಿ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News