ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ: ಜೆಎನ್ ಯು ಪ್ರೊಫೆಸರ್ ವಿರುದ್ಧ ಎಫ್ ಐಆರ್

Update: 2018-03-17 09:58 GMT

ಹೊಸದಿಲ್ಲಿ, ಮಾ.17: ವಿದ್ಯಾರ್ಥಿಗಳು ನೀಡಿದ ದೂರಿನ ಆಧಾರದಲ್ಲಿ ಜೆಎನ್ ಯು ಪ್ರೊಫೆಸರ್ ಒಬ್ಬರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.

ವಸಂತ್ ಕುಂಜ್ ಪೊಲೀಸ್ ಠಾಣೆಗೆ ತೆರಳಿದ್ದ ವಿದ್ಯಾರ್ಥಿನಿಯರು, “ನಮ್ಮ ಬಟ್ಟೆಯ ಬಗ್ಗೆ ಅಸಭ್ಯವಾಗಿ ಪ್ರೊಫೆಸರ್ ಮಾತನಾಡುತ್ತಿದ್ದಾರೆ ಹಾಗು ಪಾಠ ಮಾಡುವಾಗ ಅಸಭ್ಯವಾಗಿ ಸ್ಪರ್ಶಿಸುತ್ತಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ.

ಪ್ರೊಫೆಸರನ್ನು ಅತುಲ್ ಜೋಹ್ರಿ ಎಂದು ಗುರುತಿಸಲಾಗಿದ್ದು, ಶುಕ್ರವಾರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ್ದ ನಂತರ ಅವರು ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News