ಮೈಸೂರು: ಎಟಿಎಂ ಗಳಲ್ಲಿ ಸಿಗದ ಹಣ; ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ

Update: 2018-03-18 14:47 GMT

ಮೈಸೂರು,ಮಾ.18: ನಗರದ ಎಟಿಎಂ ಗಳಲ್ಲಿ ಹಣದ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇದಕ್ಕೆ ಕೇಂದ್ರ ಸರಕಾರವೇ ಕಾರಣ ಎಂದು ಆರೋಪಿಸಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು

ನಗರದ ರಾಮಸ್ವಾಮಿ ವೃತ್ತದಲ್ಲಿ ರವಿವಾರ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಎಟಿಎಂಗಳಲ್ಲಿ ನೋ ಕ್ಯಾಶ್ ಬೋರ್ಡ್ ಹಾಗೂ ಬ್ಯಾಂಕ್‍ಗಳಲ್ಲಿ ಕೇಳಿದಷ್ಟು ದುಡ್ಡು ಸಿಗುತ್ತಿಲ್ಲವೆಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ನೋಟ್ ಅಮಾನ್ಯೀಕರಣ ಮಾಡಿದ್ದೇ ಇದಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ನೋಟ್ ಬ್ಯಾನ್ ಮಾಡಿ ದೇಶವನ್ನು ಆರ್ಥಿಕ ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ ಎಂದು ಭರವಸೆ ನೀಡಿದ್ದರು. ಆದರೀಗ ನಗರದ ಎಲ್ಲ ಎಟಿಎಂಗಳಲ್ಲಿ ನೋ ಕ್ಯಾಶ್ ಬೋರ್ಡ್ ಹಾಗೂ ಬ್ಯಾಂಕ್‍ಗಳಲ್ಲಿ ಸಮರ್ಪಕವಾಗಿ ಕೇಳಿದಷ್ಟು ದುಡ್ಡು ಕೊಡುತ್ತಿಲ್ಲ. ಯುಗಾದಿ ಹಬ್ಬವನ್ನು ಕಹಿಯ ಹಬ್ಬವನ್ನಾಗಿ ಮಾಡುವಂತಾಗಿದೆ ಎಂದು ಕಿಡಿಕಾರಿದರು.

ದೇಶದಲ್ಲಿ ಸುಳ್ಳು ಹೇಳುವ ಪ್ರಧಾನಿ ಎಂದರೆ ನರೇಂದ್ರ ಮೋದಿ. ಅವರು ಹೇಳಿದ ಒಂದು ಕೆಲಸವನ್ನು ಈವರೆಗೂ ಮಾಡಿಲ್ಲ. ಆದರೆ, ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಈಗ ಅವರಿಗೆ ರಾಜ್ಯ ನೆನಪಾಗುತ್ತದೆ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಮಾತ್ರ ನೆನಪಾಗುತ್ತದೆ. ಮೋದಿ ಅವರ ಟಾರ್ಗೆಟ್ ಬಡವರು. ಸಿರಿವಂತರನ್ನು ಅವರೇ ಜೋಪಾನವಾಗಿ ಶ್ರೀರಕ್ಷೆ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News