ನಾಪೋಕ್ಲು : ಜಿಲ್ಲಾ ಜೆ.ಡಿ.ಎಸ್. ಯುವ ಘಟಕದ ಉಪಾಧ್ಯಕ್ಷರಾಗಿ ಇಮ್ತಿಯಾಝ್

Update: 2018-03-21 10:43 GMT

ನಾಪೋಕ್ಲು,ಮಾ.21 : ಕರ್ನಾಟಕದ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷವನ್ನು ಪರಿಣಾಮಕಾರಿ ಬೇರು ಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ರಾಜ್ಯ ಜೆ.ಡಿ.ಎಸ್. ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಆಲಿ ಮತ್ತು ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯರವರ ನಿರ್ದೇಶನದಂತೆ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ವಿಶ್ವರವರು ನಾಪೋಕ್ಲುವಿನ ಎಂ.ಎಂ. ಇಮ್ತಿಯಾಝ್ ಖಾನ್‍ರವರನ್ನು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ ನೇಮಕ ಮಾಡಿ ಅದೇಶ ಹೊರಡಿಸಿದ್ದಾರೆ.

ಈ ಗುರುತ್ತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಕ್ಷೇತ್ರದಲ್ಲಿ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿನ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News